ಡೈರಿ ಉತ್ಪನ್ನಗಳ ಜಿಎಸ್‌ಟಿ ಹೆಚ್ಚಳಕ್ಕೆ ಪ್ರತಿಭಟನೆ
Team Udayavani, Jul 22, 2022, 5:37 PM IST
ಶಹಾಬಾದ: ಲೇಬಲ್ ಹಾಕಿದ ಮೊಸರು, ಮಜ್ಜಿಗೆಗೆ ಜಿಎಸ್‌ಟಿ ವಿ ಧಿಸುವ ಹಾಗೂ ಡೈರಿ ಉತ್ಪನ್ನಗಳಿಗೆ ಜಿಎಸ್‌ಟಿ ಹೆಚ್ಚಿಸಿದ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಬುಧವಾರ ಎಸ್‌ಯುಸಿಐ ಪಕ್ಷದ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಸ್‌ಯುಸಿಐ (ಸಿ) ಪಕ್ಷದ ಸ್ಥಳೀಯ ಸಮಿತಿ ಕಾರ್ಯದರ್ಶಿ ಗಣಪತರಾವ ಮಾನೆ ಮಾತನಾಡಿ, ಮೊದಲೇ ಲೇಬಲ್ ಹಚ್ಚಿದ ಮತ್ತು ಪ್ಯಾಕೇಟ್ ಮಾಡಿರುವ ಮೊಸರು, ಲಸ್ಸಿ, ಮಜ್ಜಿಗೆ ಮೇಲೆ ಶೇ.5 ಜಿಎಸ್‌ಟಿ ವಿಧಿ ಸಲು ಮತ್ತು ಡೈರಿ ಯಂತ್ರೋಪಕರಣ, ಹಾಲು ಕರೆಯುವ ಯಂತ್ರಗಳಿಗೆ ಶೇ.12ರಿಂದ ಶೇ.18ಕ್ಕೆ ಜಿಎಸ್‌ಟಿ ಏರಿಸಲು ಚಂಡೀಗಡದಲ್ಲಿ ನಡೆದ 47ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರವನ್ನು ಎಸ್‌ಯುಸಿಐ ಉಗ್ರವಾಗಿ ಖಂಡಿಸುತ್ತದೆ. ಕೂಡಲೇ ಇದನ್ನು ವಾಪಸ್ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಎಸ್‌ಯುಸಿಐ ಜಿಲ್ಲಾ ಸಮಿತಿ ಸದಸ್ಯ ರಾಮಣ್ಣ ಎಸ್. ಇಬ್ರಾಹಿಂಪುರ ಮಾತನಾಡಿ, ಹೈನುಗಾರಿಕೆ ಮೇಲೆ ಲಕ್ಷಾಂತರ ಕುಟುಂಬಗಳು ಅವಲಂಬಿತವಾಗಿವೆ. ಇದರಲ್ಲಿ ಶೇ.71 ಮಹಿಳೆಯರು ಇದ್ದಾರೆ. ಅಲ್ಲದೇ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಹೈನುಗಾರಿಕೆಯೇ ಗ್ರಾಮೀಣ ಜನರ ಜೀವ ಉಳಿಸಿದೆ. ಇಂತಹದ್ದರಲ್ಲಿ ಜಿಎಸ್‌ಟಿ ಹೇರಿಕೆ ಸಮಂಜಸವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಸದಸ್ಯರಾದ ರಾಘವೇಂದ್ರ ಎಂ.ಜಿ, ಜಗನ್ನಾಥ ಎಸ್.ಎಚ್. ಸಿದ್ಧು ಚೌಧರಿ, ಗುಂಡಮ್ಮ ಮಡಿವಾಳ, ರಾಜೇಂದ್ರ ಅತನೂರ, ಮಹಾದೇವಿ ಮಾನೆ, ಮಹಾದೇವಿ ಅತನೂರ, ಅಂಬಿಕಾ ಗುರುಜಾಲಕರ್, ರಮೇಶ ದೇವಕರ್. ಅಜಯ್ ಎ. ರಘು ಪವಾರ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.