ಗ್ರಾಪಂ ಎದುರು ಪ್ರತಿಭಟನೆ
Team Udayavani, Jan 14, 2020, 11:58 AM IST
ಆಳಂದ: ಗ್ರಾಪಂ ಸದಸ್ಯರ ಗಮನಕ್ಕೆ ತರದೇ ಅನುದಾನ ಬಳಕೆ ಆಗುತ್ತಿದೆ ಎಂದು ಆಗ್ರಹಿಸಿ ಕೆಲ ಸದಸ್ಯರು ಮತ್ತು ಬೆಂಬಲಿತ ಗ್ರಾಮಸ್ಥರು ಪಡಸಾವಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ಸದಸ್ಯರ ಸಾಮಾನ್ಯ ಸಭೆ 14ನೇ ಹಣಕಾಸಿನ ಕ್ರಿಯಾ ಯೋಜನೆ ವಾರ್ಡ್ 2 ಮತ್ತು 3ರಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ದೂರಿದ ಪ್ರತಿಭಟನಾಕಾರರು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸಂಜಯ ರೆಡ್ಡಿ ಮನವಿ ಪತ್ರ ಸ್ವೀಕರಿಸಿ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದಾಗ ಪ್ರತಿಭಟನೆ ಹಿಂಪಡೆಯಲಾಯಿತು. ಉದ್ಯೋಗ ಖಾತ್ರಿ ಎಡಿ ಮೊಹ್ಮದ್ ಸಲೀಂ ಹಾಜರಿದ್ದರು.
ಗ್ರಾಪಂ ಸದಸ್ಯರಾದ ವಿಶ್ವನಾಥ ಜಮಾದಾರ, ಶಿವಕಿರಣ ಪಾಟೀಲ, ಗ್ರಾಮಸ್ಥರಾದ ರಮೇಶ ಹತ್ತಿಗಳ, ಕೈಲಾಸ ಬಿರಾದಾರ, ಉಮೇಶ ಪಾಟೀಲ, ಸಂಜಯಕುಮಾರ ಶೇರಿ, ಸೋಮನಾಥ ಶಿಪ್ಪಳೆ, ಅಪ್ಪಾರಾವ ಬೆಳಂ, ರವ ಜಮಾದಾರ, ಶ್ರೀಶೈಲ ಮಾಳಿ, ಶಿವಕುಮಾರ ನಾಗೂರೆ ಸೇರಿದಂತೆ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆಳಂದ ಪೊಲೀಸ್ ಠಾಣೆ ಅಧಿಕಾರಿಗಳು ಬೀಗಿ ಬಂದೋಬಸ್ತ್ ಕಲ್ಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.