ಶಾಸಕ ಗುತ್ತೇದಾರ ವಿರುದ್ಧ ಪ್ರತಿಭಟನೆ
Team Udayavani, Mar 12, 2019, 8:46 AM IST
ಆಳಂದ: ಪುರಸಭೆ ಮುಖ್ಯಾಧಿಕಾರಿಗಳಿಗೆ ಮೊಬೈಲ್‌ನಲ್ಲಿ ಶಾಸಕ ಸುಭಾಷ ಗುತ್ತೇದಾರ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಅಖೀಲ ಭಾರತ ವೀರಶೈವ ಮಹಾಸಭೆ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಾರ್ಚ್ 4ರಂದು ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ ಅವರಿಗೆ ಶಾಸಕ ಸುಭಾಷ್ ಗುತ್ತೇದಾರ ಅವರು
ಅವಾಚ್ಯವಾಗಿ ನಿಂದಿಸಿ ಅವಮಾನಿಸಿದ್ದಾರೆ. ಅಲ್ಲದೆ, ಸರ್ವಾಧಿಕಾರದಿಂದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಶಾಸಕ ಸುಭಾಷ ಗುತ್ತೇದಾರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು
ಆಗ್ರಹಿಸಿದರು.
2017-18ನೇ ಸಾಲಿನ ಎಸ್‌ಸಿಪಿ ಅಡಿ ಪಟ್ಟಣದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ನಡೆಯುತ್ತಿದೆ. ಇಲಾಖೆ ಒಪ್ಪಿಗೆ
ಪಡೆದು ಕೆಲಸ ಪ್ರಾರಂಭಿಸಲು ಮುಂದಾದಾಗ ಶಾಸಕರು ಕಾಮಗಾರಿ ಟೆಂಡರ್ ರದ್ದುಪಡಿಸುವಂತೆ ಮುಖ್ಯಾಧಿಕಾರಿಗಳಿಗೆ ಒತ್ತಾಯಿಸಿರುವ ಕ್ರಮ ಸರಿಯಲ್ಲ. ಇದು ಕಾನೂನು ಬಾಹಿರವಾಗಿದೆ. ಗುತ್ತಿಗೆ ಪಡೆದ ಗುತ್ತಿಗೆದಾರ ಕೆಲಸ ಪ್ರಾರಂಭಿಸಿದಾಗ ಕಾಮಗಾರಿ ತಡೆಯುವಂತೆ ಶಾಸಕರು ಮುಖ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಮೊಬೈಲ್ ನಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿದರು.
ಗ್ರೇಡ್-2 ತಹಶೀಲ್ದಾರ್ ಬಿ.ಜಿ. ಕುದರಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ಅರುಣಕುಮಾರ ಪಾಟೀಲ, ತಾಲೂಕು ಅಧ್ಯಕ್ಷ ಡಾ| ಎಸ್.ಆರ್. ಬೇಡಗೆ, ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ, ತಾಪಂ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ, ರೇವಣಸಿದ್ಧಪ್ಪ ನಾಗೂರೆ, ಬಸವ ಸೇನೆ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಪಾಟೀಲ, ಜಿಪಂ ಮಾಜಿ ಸದಸ್ಯ ಮಲ್ಲಿನಾಥ ಪಾಟೀಲ, ರವಿಂದ್ರ ಕೋರಳ್ಳಿ, ಬಸವರಾಜ ಪವಾಡಶೆಟ್ಟಿ, ಶಂಕರರಾವ್ ದೇಶಮುಖ ನಿರಗುಡಿ, ಮಲ್ಲಪ್ಪ ಹತ್ತರಕಿ, ಚಿನ್ನಾ ಪಾಟೀಲ, ಮೌಲಾ ಮುಲ್ಲಾ, ಜಿಪಂ ಸದಸ್ಯ ಸಿದ್ದರಾಮ ಪ್ಯಾಟಿ, ಪುರಸಭೆ ಸದಸ್ಯ ಶಿವಪುತ್ರ ನಡಗೇರಿ, ದಲಿತ ಮುಖಂಡ ಧರ್ಮ ಬಂಗರಗಾ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.