ಮುರುಘಾ ಶರಣರ ವಿರುದ್ಧ ಪ್ರತಿಭಟನೆ
Team Udayavani, Sep 3, 2022, 2:54 PM IST
ಚಿಂಚೋಳಿ: ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ ದಲಿತ ಮತ್ತು ವಿದ್ಯಾರ್ಥಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮುಖಂಡ ಮಾರುತಿಗಂಜಗಿರಿ ಮಾತನಾಡಿ, ಅನ್ಯಾಯಕ್ಕೊಳಗಾದ ಮಕ್ಕಳು ಖುದ್ದಾಗಿ ತಮಗಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಇದರ ನೈಜತೆ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನಾಕಾರರು ಬೇಡಿಕೆಗಳ ಮನವಿಪತ್ರವನ್ನು ತಹಶೀಲ್ದಾರ್ ಅಂಜುಮ ತಬಸುಮಗೆ ಸಲ್ಲಿಸಿದರು. ಅನ್ಯಾಯಕೊಳ್ಳಗಾದ ಮತ್ತು ದೂರು ನೀಡಿದ ಮಕ್ಕಳಿಗೆ ಸರ್ಕಾರ ಪ್ರತ್ಯೇಕವಾಗಿ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ದಲಿತ ವಿದ್ಯಾರ್ಥಿನಿ ಕುಟುಂಬದವರಿಗೆ ಸರ್ಕಾರಿ ನೌಕರಿ ನೀಡಬೇಕು. ದೌರ್ಜನ್ಯಕ್ಕೊಳಗಾದ ಕುಟುಂಬಗಳಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಅಜರೋದ್ದಿನ್ ಸೌದಾಗರ, ಗೋಪಾಲ ಗಾರಂಪಳ್ಳಿ, ವಾಮನರಾವ ಕೊರವಿ, ಪ್ರದೀಪ ಮೇತ್ರಿ, ಶ್ರೀನಿವಾಸ ತಾಜಲಪುರ, ಅಜರೋದ್ದಿನ್ ಎಂ.ಎಂ, ಕೆ. ಸುಭಾಷ ತಾಡಪಳ್ಳಿ, ಮೋಹನ ಐನಾಪುರ, ವಿಜಯ ತಾಡಪಳ್ಳಿ, ಪುಟ್ಟರಾಜ ತಾಡಪಳ್ಳಿ, ಗೋಪಾಲ ಎಂ.ಪಿ, ಮೌನೇಶ ಗಾರಂಪಳ್ಳಿ, ಉಲ್ಲಾಸ ಕೆರಳ್ಳಿ, ಸಿದ್ಧಲಿಂಗ ಮೇತ್ರಿ, ರಾಮಲಿಂಗ, ಮೆಹೆಬೂಬ್ ಅಲಿ, ಗುರುನಾಥ ಅಂಕಿತಾ ಕಮಲಕರ್ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.