ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Team Udayavani, Dec 23, 2020, 7:05 PM IST
ಆಳಂದ: ತಾಲೂಕಿನ ಕಡಗಂಚಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕಾಂಗ್ರೆಸ್ ಬೆಂಬಲಿತರ ಮನೆಮೇಲೆ ಪೊಲೀಸರು ಹಠಾತ್ ದಾಳಿ ಕೈಗೊಂಡು ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ನೇತೃತ್ವದಲ್ಲಿ ಬೆಂಬಲಿಗರು ಪಟ್ಟಣದ ಡಿವೈಎಸ್‌ಪಿ ಕಚೇರಿ ಎದುರು
ಮಂಗಳವಾರ ಧರಣಿ ಸತ್ಯಾಗ್ರಹ ಕೈಗೊಂಡರು. ಚುನಾವಣೆ ಮುನ್ನಾದಿನ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಗಸ್ತಿನಲ್ಲಿದ್ದ ಡಿವೈಎಸ್‌ಪಿ ಕಡಗಂಚಿ ಗ್ರಾಮದ ಕಸ್ತೂರಬಾಯಿ ಕರಬಸಪ್ಪ ನರೋಣಿ ಅವರ ಮನೆ ಮೇಲೆ ಚುನಾವಣೆ ನೀತಿ ಸಂಹಿತೆ ಆರೋಪ ನೆಪಮಾಡಿ, ಮನೆಯಲ್ಲಿ ಊಟಕ್ಕೆ ಕುಳಿತವರನ್ನು ನೋಡದೇ ಪೊಲೀಸರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಮನೆಹೊಕ್ಕು ಹೊಡೆಯುವ ಅಧಿಕಾರ ಇವರಿಗೆ ಯಾರು ನೀಡಿದ್ದಾರೆ. ಕ್ಷೇತ್ರದ ಶಾಸಕರ ಅಣತಿಯಂತೆ ಅವರ ಕೈಗೊಂಬೆಯಾಗಿ ಅಮಾಯಕರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಖಂಡಿಸಿದರು.
ಜಿ.ಪಂ ಸದಸ್ಯ ಸಿದ್ಧರಾಮ ಪ್ಯಾಟಿ, ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ,ಸತೀಶ ಪನಶೆಟ್ಟಿ, ಅಬ್ದುಲ ಸಲಾಂ ಸಗರಿ, ಪಂಡಿತ ಶೇರಿಕಾರ, ಶಂಕರರಾವ್ ದೇಶಮುಖ, ದಿಲೀಪಕ್ಷೀರಸಾಗರ ಹಾಗೂ ಪಾಟೀಲರ ನೂರಾರು ಮಂದಿ ಬೆಂಬಲಿಗರು ಪಾಲ್ಗೊಂಡಿದ್ದರು. ಘಟನಾ ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಎಸ್‌ಪಿ ಭೇಟಿ ನೀಡಿ, ಘಟನೆ ಕುರಿತು ಸೂಕ್ತ ತನಿಖೆ ಕೈಗೊಂಡುಕ್ರಮ ಜರುಗಿಸಲಾಗುವುದು. ಚುನಾವಣೆ ಪರಿಸ್ಥಿತಿಯಲ್ಲಿ ಎಲ್ಲವೂ ಗೊತ್ತಾಗುವುದಿಲ್ಲ. ತಾಳ್ಮೆಯಿಂದ ಸಹಕರಿಸಿ ಎಂದಾಗ 15 ದಿನಗಳಲ್ಲಿ ಬೇಡಿಕೆಗೆ ಸ್ಪಂದಿಸಬೇಕು ಎಂದು ಮುಖಂಡರು ಗಡವು ನೀಡಿದರು.
ಕಡಗಂಚಿಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ದೂರಿನ ಕರೆ ಮೆರೆಗೆ ಸಿಪಿಐ ಅವರನ್ನು ಕಳುಹಿಸಿಕೊಟ್ಟರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ವತಃ ನಾನೇ ಭೇಟಿ ನೀಡಿದ್ದೆ. ಅಲ್ಲಲ್ಲಿ ಜನ ಗುಂಪಾಗಿ ಇದ್ದಿದ್ದನ್ನು ಕಂಡು ಅವರನ್ನು ಮನೆಗೆಕಳುಹಿಸಲಾಯಿತು. ನಂತರ ನರೋಣಿಎನ್ನುವರಿಗೆ ಸೇರಿದ ಮನೆ ಹೊರಗೆ 20ರಿಂದ30 ದ್ವಿಚಕ್ರವಾಹನ ಕಂಡವು. ಒಳಗೆ ಹೆಚ್ಚಿನ ಜನರು ಸೇರಿ ಕುಳಿತು ಊಟ ಮಾಡುತ್ತಿದ್ದರು. ಹೀಗೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಿದ್ದರಿಂದ ಅವರನ್ನು ಚದುರಿಸಲಾಗಿದೆ. ನಾವು ತಪ್ಪು ಮಾಡಿಲ.É ಯಾರ ಒತ್ತಡಕ್ಕೂ ಒಳಗಾಗಿಲ್ಲ. ಕಾನೂನು ಪಾಲಿಸಿದ್ದೇವೆ. – ಮಲ್ಲಿಕಾರ್ಜುನ ಸಾಲಿ, ಡಿವೈಎಸ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.