ಯೋಗಿ ಸರ್ಕಾರದ ವಿರುದ್ಧ ಕಲಬುರಗಿಯಲ್ಲಿ ಪ್ರತಿಭಟನೆ:ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
Team Udayavani, Oct 2, 2020, 12:32 PM IST
ಕಲಬುರಗಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಟೌನ್ ಹಾಲ್ ಆವರಣದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಉತ್ತರ ಪ್ರದೇಶದ ಅತ್ಯಾಚಾರ ಸಂತ್ರಸ್ತೆ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಅಲ್ಲಿನ ಪೊಲೀಸರು ತಡೆದಿರುವುದು ಖಂಡನೀಯವಾಗಿದೆ. ಅಲ್ಲದೇ, ಇಬ್ಬರು ನಾಯಕರನ್ನೂ ಪೊಲೀಸರು ವಶಕ್ಕೆ ಪಡೆದಿರುವುದನ್ನು ಸರಿಯಲ್ಲ. ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆ ಎಂದು ಆರೋಪಿಸಿ ಯೋಗಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ನವರದ್ದು ದನ ಸತ್ತರೆ ರಣಹದ್ದುಕಾಯುವ ರೀತಿಯ ಮನಸ್ಥಿತಿ: ಸಿ.ಟಿ ರವಿ
ನಂತರದಲ್ಲಿ ಜಿಲ್ಲಾಧಿಕಾರಿ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ಹೊರಡುತ್ತಿದ್ದಾಗ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದರು. ಪುರುಷ ಮತ್ತು ಮಹಿಳಾ ಕಾರ್ಯಕರ್ತರನ್ನು ಪ್ರತ್ಯೇಕ ಎರಡು ವಾಹನಗಳಲ್ಲಿ ಹತ್ತಿಸಿ ಪೊಲೀಸರು ಕರೆದುಕೊಂಡು ಹೋದರು.
ಮಾಜಿ ಎಂಎಲ್ ಸಿ ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಭೀಮರೆಡ್ಡಿ ಕುರಕುಂದ, ಸಂಜೀವ ಐರೆಡ್ಡಿ, ಈರಣ್ಣ ಝಳಕಿ, ಬಾಬು ವಂಟಿ, ಮಹೇಶ್ವರಿ ವಾಲಿ, ಚಂದ್ರಿಕಾ ಪರಮೇಶ್ವರ, ರೇಣುಕಾ ಸಿಂಧೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.