ದೊರೆಸ್ವಾಮಿ ವಿರುದ್ಧ ಯತ್ನಾಳ ಟೀಕೆಗೆ ಖಂಡನೆ
Team Udayavani, Mar 3, 2020, 11:19 AM IST
ಕಲಬುರಗಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ ನಗರದ ಸಾರ್ವಜನಿಕ ಉದ್ಯಾನವನದಲ್ಲಿನ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಪ್ರಗತಿಪರ ಹಾಗೂ ಸಂವಿಧಾನಪರ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿದರು.
ಯತ್ನಾಳರ ಹೇಳಿಕೆಗಳನ್ನು ಬಿಜೆಪಿ ಸಮರ್ಥಿಸಿಕೊಳ್ಳುವುದನ್ನು ಖಂಡಿಸಿದ ಪ್ರತಿಭಟನೆಕಾರರು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಪಾಲ್ಗೊಳ್ಳದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಸಂಘ ಪರಿವಾರದವರಿಗೆ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಕಂಡರೆ ಮೊದಲಿನಿಂದಲೂ ಅಷ್ಟಕ್ಕಷ್ಟೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಪರವಾಗಿದ್ದ ಸಂಘಗಳು ಇಂದು ದೇಶಿಯ ಮತ್ತು ವಿದೇಶಿ ಬಹುರಾಷ್ಟ್ರೀಯ ಕಾರ್ಪೋರೇಟ್ ಕಂಪೆನಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಜನಸಾಮಾನ್ಯರ, ರೈತರ, ಕಾರ್ಮಿಕರ, ಯುವಜನರ, ಮಹಿಳೆಯರ ಹಕ್ಕುಗಳ ಕುರಿತು ಮಾತನಾಡುವವರು, ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿ ಸುವವರಿಗೆ ದೇಶದ್ರೋಹದ, ಪಾಕಿಸ್ತಾನ ಪರ, ನಗರದ ನಕ್ಸಲರು ಎನ್ನುವಂತೆ ಬಿಂಬಿಸಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು. ಅದರ ಭಾಗವಾಗಿಯೇ ಯತ್ನಾಳರು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ಕುರಿತು ಕೆಟ್ಟದ್ದಾಗಿ ಮಾತನಾಡಿದ್ದಾರೆ. ಬಿಜೆಪಿ ಹಿರಿಯ ನಾಯಕರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಉಳಿದ ಬಿಜೆಪಿ ನಾಯಕರು ಪ್ರತಿಕ್ರಿಯೆ ಕೊಡದೇ ಮೌನವಾಗಿದ್ದಾರೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಸ್ವಾತಂತ್ರ್ಯದ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಕಿಂಚಿತ್ತೂ ಗೌರವ ಇದ್ದರೆ ಯತ್ನಾಳರ ಹೇಳಿಕೆಯನ್ನು ಖಂಡಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದರು.
ಭಾರತೀಯ ಕಮ್ಯುನಿಸ್ಟ್ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಡಾ| ಸಿದ್ದನಗೌಡ ಪಾಟೀಲ, ಪ್ರೊ. ಆರ್.ಕೆ. ಹುಡಗಿ, ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ, ಅರ್ಜುನ ಭದ್ರೆ, ಮಾರುತಿ ಎಂ. ಗೋಖಲೆ, ಭೀಮಾಶಂಕರ ಮಾಡಿಯಾಳ, ಸನತಕುಮಾರ ಬೆಳಗಲಿ, ದತ್ತಾತ್ರೇಯ ಇಕ್ಕಳಕಿ, ಡಾ| ಮಹೇಶಕುಮಾರ ರಾಠೊಡ, ಅಶ್ವಿನಿ ಮದನಕರ, ಲಕ್ಷ್ಮೀಕಾಂತ ಹುಬ್ಬಳ್ಳಿ, ಹಣಮಂತ ಯಳಸಂಗಿ, ಎಚ್.ಎಸ್. ಪತಕಿ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.