ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ
Team Udayavani, Sep 22, 2022, 3:27 PM IST
ಶಹಾಬಾದ: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಐದು ತಿಂಗಳ ಬಾಕಿ ವೇತನ ಬಿಡುಗಡೆ ಮತ್ತು ವೇತನ ಹೆಚ್ಚಳವಾದ ಬಾಕಿ ಹಣ ಬಿಡುಗಡೆ, ಗ್ಯಾಸ್ ಸಿಲಿಂಡರ್ ಪೂರೈಕೆ, ತರಕಾರಿ ಬಿಲ್ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು) ನೇತೃತ್ವದಲ್ಲಿ ನಗರದ ಸಿಡಿಪಿಒ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ತಾಲೂಕಾಧ್ಯಕ್ಷೆ ಸಾಬಮ್ಮ ಎಂ. ಕಾಳಗಿ ಹಾಗೂ ಸಾಯಿಬಣ್ಣ ಗುಡುಬಾ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಹಾಬಾದ ವಲಯದಲ್ಲಿ ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಸುಮಾರು 5 ತಿಂಗಳಿಂದ ವೇತನ ಜಮೆಯಾಗಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಮಕ್ಕಳ ಕಲಿಕೆಗೆ ಹಣ ಇಲ್ಲದೇ ಶಾಲೆ ಬಿಡಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ 5 ತಿಂಗಳ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬಾಕಿ ವೇತನ ಬಿಡುಗಡೆ ಮಾಡುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವೇತನದ ಬಿಲ್ ದಾಖಲೆಗಳನ್ನು ಕಳುಹಿಸಲಾಗಿದೆ. ಆದರೆ ನಮ್ಮ ಇಲಾಖೆಯಿಂದ ವಿಳಂಬವಾಗಿಲ್ಲ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಳುತ್ತಾರೆ. ಅಧಿಕಾರಿಗಳು ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಮಾಡುವುದನ್ನು ಬಿಟ್ಟು ಕಾರ್ಯಕರ್ತೆಯರ ವೇತನ ಬಿಡುಗಡೆ ಮಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಾಬಮ್ಮ ಆಗ್ರಹಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಬೇಕು ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕಾರ್ಯಕರ್ತೆಯರು ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ಇಒ ಬಸಲಿಂಗಪ್ಪ ಡಿಗ್ಗಿ, ಸಿಡಿಪಿಒ ಬಿ.ಎಸ್.ಹೊಸಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ನಮ್ಮ ಇಲಾಖೆಯಲ್ಲಿ ಯಾವುದೇ ತೊಂದರೆಯಿಲ್ಲ. ನೂತನ ತಾಲೂಕು ಆಗಿದ್ದರಿಂದ ಆರ್ಥಿಕ ಇಲಾಖೆಯ(ಕೆ-2) ಲ್ಲಿ ತಾಂತ್ರಿಕ ತೊಂದರೆಯಾಗಿದೆ. ಈಗಾಗಲೇ ನಮ್ಮ ಸಿಬ್ಬಂದಿಯೊಬ್ಬರು ಬೆಂಗಳೂರಿಗೆ ಹೋಗಿದ್ದಾರೆ. ಎರಡು ದಿನಗಳಲ್ಲಿ ಸರಿಪಡಿಸಿದ ನಂತರ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳು ಬಗೆಹರಿಯಲಿವೆ ಎಂದು ಬಸಲಿಂಗಪ್ಪ ಡಿಗ್ಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಕಾರ್ಯಕರ್ತೆಯರಾದ ಬಾಲಮ್ಮ, ಶಾಂತಾ ಹೀರೆಮಠ, ಲಕ್ಷ್ಮೀ ಜಾಧವ, ಸುವರ್ಣ, ಲಕ್ಷ್ಮೀ ರಾಡಿಪಟ್ಟಿ, ಶೈನಾಜ್, ನೇತ್ರಾವತಿ, ಐನಾಮತಿ, ಶಿವುಬಾಯಿ ಮತ್ತು ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ನಾಗಪ್ಪ ರಾಯಚೂರಕರ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.