ಸುರಪುರದಲ್ಲಿ ದಲಿತ ಸಂಘಟನೆಯಿಂದ ಪ್ರತಿಭಟನೆ
Team Udayavani, Jun 12, 2022, 3:15 PM IST
ಸುರಪುರ: ಪಠ್ಯ ಪುಸ್ತಕದಲ್ಲಿ ಸುರಪುರ ಸಂಸ್ಥಾನದ ಅರಸರ ಚರಿತ್ರೆ, ಡಾ| ಬಾಬಾ ಸಾಹೇಬ ಅಂಬೇಡ್ಕರ್ ಮತ್ತು ಬಸವಣ್ಣನವರ ಚರಿತ್ರೆ ಕಡಿತಗೊಳಿಸಿರುವುದನ್ನು ಖಂಡಿಸಿ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ ಚಕ್ರತೀರ್ಥ ಅವರ ಮೇಲೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ದಲಿತ ಸಮಿತಿ ( ಕ್ರಾಂತಿಕರಿ) ಮುಖಂಡರು ಶನಿವಾರ ನಗರದ ಗಾಂಧೀಜಿ ವೃತ್ತದಲ್ಲಿ ಪ್ರತಿಭಟಿಸಿದರು.
ತಥಾಗತ್ ಗೌತಮಬುದ್ಧ ವೃತ್ತದಿಂದ ಗಾಂಧಿ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಗಾಂಧಿ ವೃತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ರಸ್ತೆ ತಡೆಗೆ ಮುಂದಾದರು. ನಂತರ ಪೊಲೀಸರ ಮಧ್ಯಸ್ಥಿಕೆಯಿಂದ ರಸ್ತೆ ತಡೆ ಕೈಬಿಟ್ಟು ಪ್ರತಿಭಟನೆ ಮುಂದುವರೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಹಿರಿಯ ಮುಖಂಡ ಮಾನಪ್ಪ ಕಟ್ಟಿಮನಿ ಮಾತನಾಡಿದರು.
ಮುಖ್ಯಮಂತ್ರಿಗೆ ಬರೆದ ಮನವಿಯನ್ನುಕಂದಾಯ ನಿರೀಕ್ಷಕ ಗುರುಬಸಪ್ಪ ಪಾಟೀಲ ಅವರಿಗೆ ಸಲ್ಲಿಸಿದರು ಸಮಿತಿ ತಾಲೂಕು ಅಧ್ಯಕ್ಷ ರಾಮಣ್ಣ ಶೆಳ್ಳಗಿ, ವಿವಿಧ ಸಂಘಟನೆಗಳ ಮುಖಂಡರಾದ ದೇವಿಂದ್ರ ಪ್ಪ ಪತ್ತಾರ, ರಮೇಶ ದೊರೆ, ಮೂರ್ತಿ ಬೊಮ್ಮನಳ್ಳಿ, ವೆಂಕಟೇಶ ಭೇಟೆಗಾರ, ಐಮದ್‌ಪಠಾಣ, ಮಲ್ಕಯ್ಯ ತೇಲ್ಕರ್, ಗಂಗಾಧರ ನಾಯಕ, ಮಲ್ಲಪ್ಪ ಕೆಸಿಪಿ ಹಣಮಂತ್ರಾಯ ಮಡಿವಾಳರ್ ದೇವಿಂದ್ ಬಾದ್ಯಾಪುರ, ಹಣಮಂತ ಕಟ್ಟಿಮನಿ, ರೇವಣಸಿದ್ದ ಮಾಲಗತ್ತಿ, ಬುದ್ದಿವಂತ, ಜಟ್ಟೆಪ್ಪ ನಾಗರಾಳ, ಖಾಜಾಹುಸೇನ ಗುಡುಗಂಟಿ, ಕಾಳಿಂಗಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.