ಮೌಲ್ಯಮಾಪನ ದೋಷ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Mar 8, 2018, 11:18 AM IST
ಕಲಬುರಗಿ: ಹುಬ್ಬಳ್ಳಿ ಕಾನೂನು ವಿವಿ ಮೌಲ್ಯಮಾಪನದಲ್ಲಿ ದೋಷಗಳಿದ್ದು, ಅವುಗಳನ್ನು ನಿವಾರಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಹುಬ್ಬಳ್ಳಿ ಕಾನೂನು ವಿವಿ ಆಧೀನದಲ್ಲಿ 2009ರಿಂದ ಬರುವ ರಾಜ್ಯದ ಬಹುತೇಕ ಕಾನೂನು ವಿದ್ಯಾಲಯಗಳು ಒಳಪಟ್ಟಿವೆ. ವಿವಿ ಶೇ. 95ರಷ್ಟು ವಿದ್ಯಾರ್ಥಿಗಳು ಅನುತ್ತಿರ್ಣರಾಗಿ ಹೊರಗುಳಿಯುತ್ತಿದ್ದಾರೆ. ಪ್ರತಿಶತ ಕಡಿಮೆ ಅಂಕ ಬರಲು ಕಾರಣವೇನು. ಮೊದಲ ಮೌಲ್ಯಮಾಪನದಲ್ಲಿ ಫೇಲ್ ಮಾಡಿ, ಮರುಮೌಲ್ಯಮಾಪನದಲ್ಲಿ ಪಾಸ್ ಮಾಡುವುದು ಏಕೆ ಎಂದು ಪ್ರಶ್ನಿಸಿದರು.
ಪಠ್ಯಕ್ರಮದ ನೀಲಿನಕ್ಷೆ ನೀಡಬೇಕು. ವಿವಿ ತನ್ನ ಜವಾಬ್ದಾರಿ ಸರಿಯಾಗಿ ನಿಭಾಯಿಸುತ್ತಿಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚಲ್ಲಾಟವಾಡುತ್ತಿದೆ. ಕೆಲ ಉಪನ್ಯಾಸಕರು ಪಠ್ಯಮಾಡದೇ ಮೌಲ್ಯಮಾಪನ ಮಾಡುತ್ತಿದ್ದಾರೆ.
ಆದ್ದರಿಂದ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ. ಅನೇಕ ವಿದ್ಯಾರ್ಥಿಗಳ ಮೌಲ್ಯಮಾಪನ ಮಾಡುವ ಉಪನ್ಯಾಸಕರು
33, 34,35 ಹಾಗೂ 36ರಂತೆ ಅಂಕ ನೀಡಿ ವಿದ್ಯಾರ್ಥಿಗಳನ್ನು ಫೇಲ್ ಮಾಡುತ್ತಿದ್ದಾರೆ.
ಹಲವು ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದರೆ ಪ್ರತಿ ವಿಷಯಕ್ಕೆ 500 ರೂ.ಗಳಂತೆ ಹಾಗೂ ಇನ್ನುಳಿದ ಕೆಲ ವಿದ್ಯಾರ್ಥಿಗಳು ಚ್ಯಾಲೆಂಜಿಂಗ್ ಮೌಲ್ಯಮಾಪನವನ್ನು ಪ್ರತಿ ವಿಷಯಕ್ಕೆ 2100 ರೂ. ಪರೀಕ್ಷಾ ಶುಲ್ಕ ಸಂದಾಯ ಮಾಡಿದರೂ ಹಲವಾರು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿದರು.
ವಿದ್ಯಾರ್ಥಿಗಳು ಮೂರು ವರ್ಷ ಹಾಗೂ 5 ವರ್ಷಗಳ ಕಾನೂನು ಕೋರ್ಸ್‌ಗಳ ಬಗ್ಗೆ ಜಿಗುಪ್ಸೆಗೊಂಡು ಒಳ್ಳೆಯ ವಿದ್ಯಾರ್ಥಿಗಳು ಕಾನೂನು ಪ್ರವೇಶ ಕೋರ್ಸ್‌ಗೆ ಸೇರ್ಪಡೆಯಾಗಲು ಹಿನ್ನಡೆಯಾಗುತ್ತಿದೆ. ಕೂಡಲೇ ಈ ದೋಷ ನಿವಾರಿಸಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿಗಳು ನಗರದ ಸರ್ದಾರ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.