ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jun 13, 2017, 5:02 PM IST
ಜೇವರ್ಗಿ: ರೈತರ ಸಾಲ ಸಂಪೂರ್ಣ ಮನ್ನಾ ಹಾಗೂ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಹಳೆ ತಹಶೀಲ್ದಾರ ಕಚೇರಿಯಿಂದ ಮಿನಿ ವಿಧಾನಸೌಧ ಕಚೇರಿ ವರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು, ಕೂಲಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂತ ರೈತ ಸಂಘ ತಾಲೂಕು ಘಟಕದ ಅಧ್ಯಕ್ಷ ಸುಭಾಷ ಹೊಸಮನಿ, ಸರಕಾರ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು.
ತಾಲೂಕಿನ ವಿವಿಧ ಪಂಚಾಯತ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಹಣ ಬಿಡುಗಡೆ ಮಾಡಬೇಕು. ಅಂಗವಿಕಲ, ಸಂಧ್ಯಾಸುರûಾ, ವಿಧವಾ ವೇತನನದ ಹಣವನ್ನು ಕೂಡಲೇ ಜಮಾ ಮಾಡಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರಕಾರ ಉದ್ಯೋಗ ಖಾತ್ರಿ ಯೋಜನೆಗೆ ಬೇಕಾಗುವಷ್ಟು ಅನುದಾನ ಕೂಡಲೇ ರಾಜ್ಯಗಳಿಗೆ ಬಿಡುಗಡೆ ಮಾಡಬೇಕು.
ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಖಾಸಗಿಕರಣ ಮಾಡುವುದನ್ನು ನಿಲ್ಲಿಸುವುದು. ಮಹಿಳೆಯರು ಮತ್ತು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಬೇಕು. ಶಖಾಪುರ ಗ್ರಾಮದಲ್ಲಿ ಶೌಚಾಲಯದ ವ್ಯವಸ್ಥೆ ಮಾಡುವುದು. ರೇಶನ್ ಕಾರ್ಡ್, ಸೀಮೆ ಎಣ್ಣಿ ಸೇರಿದಂತೆ 14 ರೀತಿಯ ಆಹಾರ ಧಾನ್ಯವನ್ನು ವಿತರಿಸುವುದು. ರಾಜ್ಯ ಸರಕಾರ ಬರ ಕಾಮಗಾರಿ ಆರಂಭಿಸಬೇಕು.
ರೈತರಿಗೆ ಬೀಜ ಗೊಬ್ಬರ ಶೀಘ್ರದಲ್ಲಿಯೇ ದೊರಕುವಂತೆ ಮಾಡಬೇಕು. ರಾಜ್ಯ ಸರಕಾರ ಬ್ಯಾಕ್‌ಲಾಗ್ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಶಿಕ್ಷಣದ ಖಾಸಗಿಕರಣ ಕೈಬಿಡಬೇಕು. ಬಡ್ತಿಯಲ್ಲಿ ಮೀಸಲಾತಿ ನೀಡಿಕೆ ಕ್ರಮ ಮುಂದುವರಿಸುವುದು ಸೇರಿದಂತೆ ಹಲವಾರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.
ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಸಿದ್ದರಾಮ ಹರವಾಳ, ರೈತ ಮುಖಂಡರಾದ ವೆಂಕೋಬರಾವ ವಾಗಣಗೇರಿ, ಪರಶುರಾಮ ಬಡಿಗೇರ, ಪೀರಪ್ಪ ಮಾದರ, ವಿಠuಲ್ ಹಟ್ಟಿ, ಮಹಾದೇವ ಮಾರಡಗಿ, ಯಲ್ಲಾಲಿಂಗ ಬೇಲೂರ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.