ಕೃಷಿ ಪತ್ತಿನ ಸಂಘದ ನೌಕರರಿಂದ ಪ್ರತಿಭಟನೆ
Team Udayavani, Feb 1, 2019, 6:44 AM IST
ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಉದ್ಯೋಗಿಗಳಿಗೆ ಸೇವಾ ಭದ್ರತೆ, ವೇತನ ಶ್ರೇಣಿ, ಪಿಂಚಣಿ ಮುಂತಾದ ಸೌಲಭ್ಯಗಳಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಬ್ಯಾಂಕ್‌ಗಳ ಕ್ಷೇಮಾಭಿವೃದ್ಧಿ ಸಂಘ, ಆಳಂದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.
ಸಂಘಗಳಲ್ಲಿ ಸುಮಾರು 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಯಾವುದೇ ರೀತಿಯ ಸೇವಾ ಭದ್ರತೆ ಹಾಗೂ ಸೌಲಭ್ಯಗಳು ನೌಕರರಿಗೆ ಇಲ್ಲ . ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರ ಸಂಘಗಳ ಮೂಲಕ ನೌಕರರು ರೈತರ ಆರ್ಥಿಕ ಅಭಿವೃದ್ಧಿಗೆ, ವ್ಯವಸಾಯ ಉಪಕರಣ, ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜ, ಬೆಳೆ ವಿಮೆ, ಸರ್ಕಾರದ ಸಹಾಯ ಧನ, ಪಡಿತರ ವಿತರಣೆ, ಸರ್ಕಾರದ ಬೆಂಬಲ ಬೆಲೆ ಯೋಜನೆ ಜಾರಿ, ಸಾಲ ಮನ್ನಾದಂತ ಯೋಜನೆಗಳ ಜಾರಿಗೆ ನೌಕರರು ಹಗಲು-ರಾತ್ರಿ ದುಡಿದರೂ ಅದಕ್ಕೆ ತಕ್ಕ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬರುವ ಬಜೆಟ್ ಅಧಿವೇಶನದಲ್ಲಾದರೂ ಬೇಡಿಕೆ ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನೌಕರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.