ಕೆಬಿಜೆಎನ್‌ಎಲ್ ಕಚೇರಿ ಎದುರು ಪ್ರತಿಭಟನೆ
Team Udayavani, Aug 20, 2022, 3:07 PM IST
ಜೇವರ್ಗಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಯಡ್ರಾಮಿ ತಾಲೂಕಿನ ಗೂಗಿಹಾಳ ಹಾಗೂ ಇಜೇರಿ ಗ್ರಾಮದಲ್ಲಿ ನಡೆಯುತ್ತಿರುವ ಕೆರೆ ತುಂಬುವ ಯೋಜನೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ತಾಲೂಕು ಘಟಕದ ವತಿಯಿಂದ ತಾಲೂಕಿನ ಚಿಗರಳ್ಳಿ ಕೆಬಿಜೆಎನ್‌ಎಲ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಯಡ್ರಾಮಿ ತಾಲೂಕಿನ ಇಜೇರಿ ಹಾಗೂ ಗೂಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ಕೆರೆ ತುಂಬುವ ಯೋಜನೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕ್ರಿಯಾ ಯೋಜನೆ ಪ್ರಕಾರ ಕಾಮಗಾರಿ ನಡೆಸದೇ ಬೇಕಾಬಿಟ್ಟಿಯಾಗಿ ನಡೆಸಲಾಗುತ್ತಿದೆ. ನಾಲಾ ಬಿರುಕು ಬಿಟ್ಟ ಪರಿಣಾಮ ಹೊಲಗಳಿಗೆ ನೀರು ಹರಿದು ತೇವಾಂಶ ಹೆಚ್ಚಾಗಿ ಬೆಳೆಹಾನಿಯಾಗುವ ಸಂಭವ ವಿದೆ. ಕೂಡಲೇ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು. ನಿರ್ಲಕ್ಷಿಸಿದರೆ ಮುಂಬರುವ ದಿನಗಳಲ್ಲಿ ಬೀಮರಾಯನಗುಡಿ ಕೇಂದ್ರ ಕಚೇರಿ ಎದುರು ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ಅದ್ಯಕ್ಷ ಶ್ರವಣಕುಮಾರ ನಾಯಕ ಇಜೇರಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಅಲ್ಲಾಪಟೇಲ ಇಜೇರಿ, ತಾಯಪ್ಪ ನಾಯಕ, ದೇವಿಂದ್ರ ಚಿಗರಳ್ಳಿ, ಸಿದ್ದು ನೀರಲಕೋಡ, ಸೈಯದ್ ಪಟೇಲ ಪೊಲೀಸ್ ಪಾಟೀಲ, ಸೆ„ದಪ್ಪ ಹೊಸಮನಿ, ಮೌಲಾಲಿ ಕುಕನೂರ, ರಮೇಶ ಗಜಕೋಶ, ನಿಂಗಪ್ಪ ಚಿಗರಳ್ಳಿ, ವಾಸುದೇವ ಯಂಕಂಚಿ, ಯೂನುಸ್ ಕಾಲೇಗೌಡ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.