ಗಾಂಧಿ ಪ್ರತಿಮೆ ಮುಂದೆ ಉಪವಾಸ ಸತ್ಯಾಗ್ರಹ
Team Udayavani, Oct 3, 2020, 3:21 PM IST
ಕಲಬುರಗಿ: ನಗರದ ಟೌನ್ ಹಾಲ್ ಆವರಣದಲ್ಲಿರುವ ಗಾಂಧಿ ಪ್ರತಿಭಟನೆ ಮುಂದೆ ಎರಡು ಪ್ರತ್ಯೇಕ ಧರಣಿ ಸತ್ಯಾಗ್ರಹಗಳು ನಡೆದವು.
ಕೋವಿಡ್ ಮತ್ತು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ತಮ್ಮ ನೆರವಿಗೆ ಸರ್ಕಾರ ಧಾವಿಸಬೇಕೆಂದು ಖಾಸಗಿ ಶಾಲಾ- ಕಾಲೇಜುಗಳ ಶಿಕ್ಷಕರು ಮತ್ತು ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಎರಡು ಸಂಘಟನೆಗಳು ಸತ್ಯಾಗ್ರಹ ಹಮ್ಮಿಕೊಂಡಿದ್ದವು.
ಈಶಾನ್ಯ ವಲಯ ಶಿಕ್ಷಕರ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟ ಅಧ್ಯಕ್ಷರಾದ ಎಂ.ಬಿ. ಅಂಬಲಗಿ ನೇತೃತ್ವದಲ್ಲಿ ಶಿಕ್ಷಕರು ಉಪವಾಸ ಸತ್ಯಾಗ್ರಹ ನಡೆಸಿ, ಖಾಸಗಿ ಶಾಲಾ-ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿಗೆ ಸರ್ಕಾರಮಾಸಿಕವಾಗಿ ತಲಾ 5 ಸಾವಿರ ರೂ. ಪರಿಹಾರ ಧನ ನೀಡಬೇಕೆಂದು ಒತ್ತಾಯಿಸಿದರು.
ಸರ್ಕಾರಿ ಹಾಗೂ ಅನುದಾನಿತ ಶಾಲಾ- ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಕೇಂದ್ರ ಸರ್ಕಾರದ ಮಾದರಿಯಂತೆ ಸಂಬಳ ನೀಡಬೇಕು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಲ್ಲಿ ಸೇವೆ ಸಲ್ಲಿಸುತ್ತಿರುವ 14,817 ಜನ ಅತಿಥಿ ಶಿಕ್ಷಕರ ಸೇವೆ ಕಾಯಂಗೊಳಿಸಬೇಕು ಹಾಗೂ 371 (ಜೆ) ಅಡಿಯಲ್ಲಿ ಅಗತ್ಯ ಸವಲತ್ತುಗಳನ್ನು ಕಲ್ಪಿಸಬೇಕೆಂದು ಬೆಳಗ್ಗೆಯಿಂದ ಸಂಜೆಯವರೆಗೂ ಉಪವಾಸ ಕುಳಿತುಕೊಂಡರು.
ಉಪವಾಸ ಸತ್ಯಾಗ್ರಹವನ್ನು ಸಾಹಿತಿಗಳಾದ ಎ.ಕೆ. ರಾಮೇಶ್ವರ, ಡಾ| ಕೆ.ಎಸ್.ಬಂಧು, ಧರ್ಮಣ್ಣ ಧನ್ನಿ ಹಾಗೂ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಾಮರಾವ ಸೂರನ್ ಬೆಂಬಲ ಸೂಚಿಸಿದರು. ಶಾಂತರೆಡ್ಡಿ ಚೌಧರಿ ಮುದನೂರ, ಡಾ| ಪರಮೇಶ್ವರ ಬಸಸೂಡೆ, ಅಸ್ಲಂ ಖದೀರ್, ಮಹಾಂತಯ್ಯ ಹಿರೇಮಠ ಜೇವರ್ಗಿ, ಶಿವಪುತ್ರಪ್ಪ ನೆಲ್ಲಗಿ, ಮಲ್ಲಿಕಾರ್ಜುನ ಪಾಟೀಲ್, ಮಹಿಬೂಬ ಮುಂತಾದವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
ರೈತ ಸಂಘರ್ಷ ಸಮನ್ವಯ ಸಮಿತಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ , ಕಾರ್ಮಿಕ ವಿರೋಧಿಯಾದ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೃಷಿ ಉತ್ಪನ್ನ ವಾಣಿಜ್ಯ ಮತ್ತು ಮಾರಾಟ ಕಾಯ್ದೆ, ವಿದ್ಯುತ್ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಅಖೀಲಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಜಿಲ್ಲಾ ಸಮಿತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು. ರೈತರು ಕಾರ್ಮಿಕರು ಇತ್ಯಾದಿದುಡಿಯುವ ವರ್ಗಗಳ ಪ್ರತಿರೋಧವನ್ನು ಲೆಕ್ಕಿಸದೇ ಪ್ರಜಾಪ್ರಭುತ್ವ ನಿಯಮಗಳನ್ನು ಗಾಳಿಗೆ ತೂರಿ ಕೇಂದ್ರ ಸರ್ಕಾರ ದೇಶದಆಹಾರ ಭದ್ರತೆ ಸ್ವಾವಲಂಬನೆಗೆ ಧಕ್ಕೆ ತರಲು ಹೊರಟಿದೆ. ಅಂತಹ ನೀತಿಯಿಂದಹಿಂದೆ ಸರಿಯುವರೆಗೆ ಈ ಸಂಘರ್ಷ ನಿಲ್ಲುವುದಿಲ್ಲ ಎನ್ನುವ ಪ್ರತಿಜ್ಞೆ ಹೊಂದಿಗೆ ಹೋರಾಟ ನಡೆಸಿದರು.
ಮುಖಂಡರಾದ ಭೀಮಾಶಕಂಕರ ಮಾಡ್ಯಾಳ, ಮಹೇಶ್ ಎಸ್‌ಬಿ, ಪಾಂಡುರಂಗ ಮಾವನಕರ್, ಬಸವರಾಜ ಗೌಡ, ಜಗದೇವಿ ಹೆಗಡೆ, ಮುಬೀನ್ ಅಹ್ಮದ್, ಭೀಮರಾಯ ರೂಪನೂರ, ಹಣಮಂತರಾಯ ಅಟ್ಟೂರ, ಸುಧಾಮ ಧನ್ನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.