ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ
Team Udayavani, Apr 5, 2022, 12:32 PM IST
ಸೇಡಂ: ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೌಚಾಲಯವಿದೆ, ಆದರೆ ಶುಚಿಯಾಗಿಲ್ಲ. ಗಬ್ಬೆದ್ದು ನಾರುತ್ತಿದೆ. ವರ್ಷಕ್ಕೊಮ್ಮೆ ತೊಳೆಯುತ್ತಾರೆ. ಕೊಠಡಿಗಳಿವೆ, ಅಲ್ಲಿರುವ ಬೆಂಚುಗಳು ಮುರಿದಿವೆ. ಗ್ರಂಥಾಲಯವಿದೆ, ಆದರೆ ಪುಸ್ತಕಗಳೇ ಇಲ್ಲ. ಕ್ರೀಡಾಂಗಣವಿದೆ, ಆದರೆ ಆಟವಾಡುವ ಭಾಗ್ಯವಿಲ್ಲ. ಇವು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತೆರೆದಿಟ್ಟ ಕಾಲೇಜಿನ ದುಸ್ಥಿತಿಯ ವಿಷಯಗಳು. ಕಾಲೇಜು ಪರೀಕ್ಷಾ ಶುಲ್ಕ 260ರಿಂದ ಹಠಾತ್ತನೇ 1400ಕ್ಕೆ ಏರಿಸಿದ್ದನ್ನು ಖಂಡಿಸಿ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಪ್ರಾಂಶುಪಾಲರ ಎದುರು ತಮ್ಮ ಸಮಸ್ಯೆಗಳ ಸರಮಾಲೆಯನ್ನೇ ತೆರೆದಿಟ್ಟಿದ್ದಾರೆ. ಖಾಸಗಿ ಕಾಲೇಜುಗಳಲ್ಲಿ ಪರೀಕ್ಷಾ ಶುಲ್ಕ ಕಡಿಮೆ ಇದೆ. ಆದರೆ ಸರಕಾರಿ ಕಾಲೇಜಲ್ಲಿ ಐದು ಪಟ್ಟು ಜಾಸ್ತಿ ಇದೆ. ಅಲ್ಲದೆ ವಿನಾಯಿತಿ ಮತ್ತು ವಿದ್ಯಾರ್ಥಿ ವೇತನ ವರ್ಷಗಳೇ ಕಳೆದರೂ ಸಹ ಇನ್ನು ಬಿಡುಗಡೆ ಮಾಡಿಲ್ಲ. ಕೊವಿಡ್ ಕಾರಣ ಹೇಳಿ ವಿದ್ಯಾರ್ಥಿಗಳ ಹಣ ಲೂಟಿ ಮಾಡಲಾಗಿದೆ ಎಂದು ದೂರಿದರು.
ಈ ಮಧ್ಯೆ ಹಠಾತ್ತನೇ ಪರೀಕ್ಷಾ ಶುಲ್ಕ ಹೆಚ್ಚಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಪರೀಕ್ಷಾ ಶುಲ್ಕ ಕಡಿಮೆ ಮಾಡುವವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಎಂದು ಪಟ್ಟು ಹಿಡಿದರು.
ನಂತರ ಪ್ರಾಂಶುಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಾಂಶುಪಾಲರು, ಪರೀಕ್ಷಾ ಶುಲ್ಕ ಹೆಚ್ಚಳ ಅಥವಾ ಕಡಿಮೆ ಮಾಡುವ ಅಕಾರ ತಮಗಿಲ್ಲ. ಇದು ಸರಕಾರದ ಮಟ್ಟದಲ್ಲಿ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿಗಳಿಗೆ ಟ್ಯಾಬ್ ಮತ್ತು ಲ್ಯಾಪ್‌ಟಾಪ್ ನೀಡಲಾಗಿದೆ. ಅದಕ್ಕಾಗಿ ಗ್ರಂಥಾಲಯದಲ್ಲಿ ಪುಸ್ತಕಗಳು ಕಡಿಮೆಗೊಳಿಸಲಾಗಿದೆ. ಶೌಚಾಲಯವನ್ನು ಒಂದೆರಡು ದಿನದಲ್ಲಿ ಸ್ವಚ್ಛಗೊಳಿಸಲಾಗುವುದು. ಬೇಡಿಕೆಗಳನ್ನು ಸರಕಾರಕ್ಕೆ ಮುಟ್ಟಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.