ಹಾಸ್ಟೇಲ್ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
Team Udayavani, Feb 27, 2022, 9:58 AM IST
ಕಲಬುರಗಿ: ನಗರದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಆಹಾರ ವಿತರಣೆ ಮತ್ತು ಮೂಲಭೂತ ಸೌಕರ್ಯ ಕೊರತೆ ಖಂಡಿಸಿ ಡಾ| ಬಾಬುಜಗಜೀವನರಾಂ ಅಭಿವೃದ್ಧಿ ಮತ್ತು ಹೋರಾಟ ಸಮಿತಿ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕಳಪೆ ಮಟ್ಟ ಮತ್ತು ಕಲಬೆರಕೆ ಆಹಾರ ಪೂರೈಸಲಾಗುತ್ತಿದೆ. ಅಲ್ಲದೇ, ಶೌಚಾಲಯಕ್ಕೆ ಸರಿಯಾದ ನೀರು ಸರಬರಾಜು ಇರುವುದಿಲ್ಲ ಮತ್ತು ಸ್ನಾನ ಮಾಡುವುದಕ್ಕೆ ಕೂಡ ನೀರು ಬರುವುದಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಸತಿ ನಿಲಯ ಕೋಣೆಗಳ ಬಾಗಿಲು, ಕಿಟಕಿಗಳು ಮುರಿದು ಹೋಗಿವೆ. ಮಲಗಲು ಸ್ಥಳ ಸರಿಯಾಗಿ ಲಭ್ಯವಿರುವುದಿಲ್ಲ. ಒಂದು ಕೋಣೆಯಲ್ಲಿ ಸುಮಾರು 12ರಿಂದ 15 ವಿದ್ಯಾರ್ಥಿಗಳು ಇಕ್ಕಟ್ಟಿನ ಜಾಗದಲ್ಲಿ ಮಲಗುವಂತೆ ಆಗಿದೆ. ಈ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬಾರಿಗೆ ವಾರ್ಡನ್ ಗಮನಕ್ಕೆ ತರಲಾಗಿದೆ. ಆದರೂ, ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ರಾಜು ಕಟ್ಟಿಮನಿ, ರಮೇಶ ವಾಡೇಕರ, ಮುರುಳಿ ಗುತ್ತೇದಾರ, ಸೈದಪ್ಪ ಕಡೆಚೂರ, ಜಾನ್ ತಾರಫೈಲ್, ರಾಕೇಶ ವಾಗ, ದೇವಿಂದ್ರ ಬಿಳವಾರ ಸೇರಿ ಹಲವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.