ಕ್ವಾರಂಟೈನ್ ಕೇಂದ್ರದಲ್ಲಿ ಸೌಕರ್ಯ ಒದಗಿಸಿ
Team Udayavani, May 30, 2020, 6:49 AM IST
ಕಲಬುರಗಿ: ಲಾಕ್‌ಡೌನ್ ಸಡಿಲಿಕೆ ನಂತರ ಜಿಲ್ಲೆಗೆ ಮಹಾರಾಷ್ಟ್ರ ಸೇರಿದಂತೆ ಬೇರೆ-ಬೇರೆ ರಾಜ್ಯಗಳಿಂದ ಬಂದ 35,723 ಜನರನ್ನು 547 ಕ್ವಾರಂಟೈನ್ ಕೇಂದ್ರಗಳಲ್ಲಿ ಇಡಲಾಗಿದ್ದು, ಇವರಿಗೆ ಅಗತ್ಯ ಸೌಕರ್ಯ ಕಲ್ಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರಿನಿಂದ ಶುಕ್ರವಾರ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿಗಳು, ಜಿಲ್ಲೆಗೆ ಆಗಮಿಸಿರುವ ವಲಸಿಗರಲ್ಲಿ 13,701 ಮಾದರಿ ಸಂಗ್ರಹಿಸಲಾಗಿದೆ. ಒಟ್ಟಾರೆ ಇದು ವರೆಗೆ 20,743 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ 4,34,438 ಪ್ರಯಾಣಿಕರ ಸ್ಕ್ರೀನಿಂಗ್ ಮಾಡಲಾಗಿದೆ. ಅಂತಾರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ 35,723 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. 174 ಜನರನ್ನು ಐಸೋಲೇಶನ್ ದಲ್ಲಿ ಇಡಲಾಗಿದೆ. ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಿಂದ ಇನ್ನು ಹೆಚ್ಚಿನ ಪ್ರಮಾಣದಲ್ಲಿ ವಲಸಿಗರು ಬರುವ ನಿರೀಕ್ಷೆ ಇದ್ದು, ತಪಾಸಣೆ ನಡೆಸದೇ ಯಾವುದೇ ಕಾರಣಕ್ಕೂ ಹೊರ ರಾಜ್ಯಗಳಿಂದ ಬರುವವರಿಗೆ ಜಿಲ್ಲೆಯೊಳಗೆ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದರು.
ಜೇವರ್ಗಿಯಲ್ಲಿ ಹೆಚ್ಚು ಜನರು ಭೀಮಾ ನದಿ ತೀರದ ಮೂಲಕ ಜಿಲ್ಲೆಗೆ ಆಗಮಿಸುತ್ತಿರುವ ಮಾಹಿತಿ ಇದೆ. ತಪಾಸಣೆಗೆ ಒಳಗಾಗದೇ ನೇರವಾಗಿ ಅವರ ಊರುಗಳಿಗೆ ತೆರಳಿ, ಇತರರಿಗೆ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕು. ಅನಧಿಕೃತವಾಗಿ ಜಿಲ್ಲೆಗೆ ಪ್ರವೇಶಿಸಿ ತಿರುಗಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿ, ಸರ್ಕಾರದ ನಿರ್ದೇಶನ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಹೆಚ್ಚು ನಿಗಾವಹಿಸಬೇಕು. ಯಾವುದೇ ನಿರಾಶ್ರಿತರು, ವಲಸಿಗರು ಹೊರ ಜಿಲ್ಲೆಗಳಿಂದ ಬಂದು ಹಸಿವಿನಿಂದ ಬಳಲಬಾರದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಪೇಕ್ಷೆ ಇದಾಗಿದ್ದು, ಈ ಕುರಿತು ಜಿಲ್ಲಾಡಳಿತ ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು. ಆಹಾರ ಸಾಮಗ್ರಿಗಳಲ್ಲಿ ದುರು ಪಯೋಗ ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಂಡು, ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಡಳಿತಕ್ಕೆ ಆದೇಶಿಸಿದರು.
ತಪ್ಪು ಸಂದೇಶ ಹರಡಿದರೆ ಕ್ರಮ: ಸಾಮಾಜಿಕ ಜಾಲಾತಾಣದಲ್ಲಿ ಕೋವಿಡ್ ವಿಷಯದಲ್ಲಿ ತಪ್ಪು ಸಂದೇಶ ಹರಡುತ್ತಿರುವುದು ಕಂಡುಬರುತ್ತಿದೆ. ತಪ್ಪು ಸಂದೇಶ ರವಾನೆ ಮಾಡುವ ಸೋಷಿಯಲ್ ಮಿಡಿಯಾ ಖಾತೆದಾರರ ವಿರುದ್ಧ ಕ್ರಮಕೈಗೊಳ್ಳಿ ಎಂದು ಹೇಳಿದರು.
ರೈತರಿಗೆ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ: ಈಗಾಗಲೇ ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜ, ನಕಲಿ ಕಂಪನಿಗಳ ರಸಗೊಬ್ಬರ ಪೂರೈಕೆ ಆಗಿರುವುದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ಕೈಗೊಂಡು ಪ್ರಕರಣ ದಾಖಲಿಬೇಕು ಎಂದು ಜಿಲ್ಲಾಡಳಿತಕ್ಕೆ ಸಚಿವರು ನಿರ್ದೇಶನ ನೀಡಿದರು.
ವಿಡಿಯೋ ಸಂವಾದದಲ್ಲಿ ಬೆಂಗಳೂರಿನಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್ ಹಾಗೂ ಜಿಲ್ಲಾಧಿಕಾರಿ ಶರತ್ ಬಿ, ಜಿ.ಪಂ ಸಿಇಒ ಡಾ| ರಾಜಾ ಪಿ., ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಇದ್ದರು.
ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಒದಗಿಸಿ : ಬೇಸಿಗೆ ಇರುವುದರಿಂದ ಕುಡಿಯುವ ನೀರಿನ ಅಭಾವ ಇರುವ ಸಾಧ್ಯತೆ ಇದೆ. ಆದ್ದರಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಬಯಸುವವರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಒದಗಿಸಬೇಕು. ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಸ್ಪತ್ಛತೆ ಕಾಪಾಡಬೇಕು. ನಗರ ಪ್ರದೇಶಗಳಲ್ಲೂ ವಿವಿಧ ಇಲಾಖೆಗಳ ಮೂಲಕ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್-19ರ ಹಿನ್ನೆಲೆಯಲ್ಲಿ ಘೋಷಿಸಿದ ಎಲ್ಲ ಪರಿಹಾರ ಯೋಜನೆಗಳು ತ್ವರಿತವಾಗಿ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಫಲಾನುಭವಿಗಳ ಖಾತೆ ಪರಿಹಾರಧನ ಜಮಾ ಆಗುವಂತೆ ಮೇಲುಸ್ತುವಾರಿ ವಹಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.