ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಿ
Team Udayavani, Sep 11, 2022, 3:57 PM IST
ವಿಜಯಪುರ: ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅವರು ಸರ್ಕಾರಿ ಜಿಲ್ಲಾ ಆಯುಷ್ ಕಚೇರಿ, ಆಯುಷ್ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಆಯುರ್ವೇದ ವೈದ್ಯಕೀಯ ಸೇವೆ ಪಡೆಯಲು ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳಿಗೆ ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಆರೋಗ್ಯ ಸೇವೆ ನೀಡುವಂತೆ ಆಯುಷ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸಾ ಸೌಕರ್ಯಗಳ ಬಗ್ಗೆ ಮತ್ತು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯತತ್ಪರ್ಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಆಸ್ಪತ್ರೆಯ ಒಳ ರೋಗಿಯ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಇಒ, ಆಯುಷ್ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸೆ ಮತ್ತು ಸೌಕರ್ಯಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದರು.
ಆಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ದಿನನಿತ್ಯ ಬರುವ ರೋಗಿಗಳ ಸಂಖ್ಯೆ, ಸದರಿ ಆಸ್ಪತ್ರೆಯಲ್ಲಿ ನೀಡುವ ಚಿಕಿತ್ಸೆ, ಔಷಧ ಕುರಿತು ಮಾಹಿತಿ ಪಡೆದು ಪರಿಶೀಲಿಸಿದರು.
ಇದೆ ವೇಳೆ ಆಸ್ಪತ್ರೆಯ ಪ್ರಯೋಗಾಲಯ, ಪಂಚಕರ್ಮ ವಿಭಾಗಕ್ಕೆ ಸಹ ಭೇಟಿ ನೀಡಿ ಪರಿಶೀಲಿಸಿ ಸದರಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳ ಸಂಖ್ಯೆ, ಚಿಕಿತ್ಸಾ ವಿಧಾನದ ಕುರಿತು ಮಾಹಿತಿ ಪಡೆದರು.
ಔಷಧ ವಿತರಣಾ ವಿಭಾಗಕ್ಕೆ ಭೇಟಿ ನೀಡಿದ ಸಿಇಒ, ಆಸ್ಪತ್ರೆಯಲ್ಲಿ ಸರ್ಕಾರದಿಂದ ನೀಡುವ ಉಚಿತ ಔಷಧ ವಿತರಣೆ ವ್ಯವಸ್ಥೆ ಪರಿಶೀಲಿಸಿ ಜನರಿಗೆ ಉತ್ತಮ ಸೇವೆ ನೀಡುವಂತೆ ಸೂಚಿಸಿದರು. ಪ್ರಸಕ್ತ ಸಾಲಿನಲ್ಲಿ ಜಿಪಂ ಕ್ರಿಯಾಯೋಜನೆಯಲ್ಲಿ ಆಯುಷ್ ಕಚೇರಿ ಕಟ್ಟಡಕ್ಕಾಗಿನ ಸ್ಥಳ ಪರಿಶೀಲನೆ ನಡೆಸಿದ ಅವರು, ಆಯುಷ್ ಆಸ್ಪತ್ರೆಯಲ್ಲಿ ವಾಹನಗಳ ನಿಲುಗಡೆ ಸ್ಥಳ, ರೋಗಿಗಳಿಗೆ ಕುಳಿತುಕೊಳ್ಳಲು ಸಿಮೆಂಟ್ ಕುರ್ಚಿ ಸೌಲಭ್ಯ ಕಲ್ಪಿಸುವ ಕುರಿತು ಚರ್ಚಿಸಿದರು.
ನಂತರ ಜಿಲ್ಲಾ ಆಯುಷ್ ಅಧಿಕಾರಿ ಡಾ| ಅನುರಾಧಾ ಚಂಚಲಕರ, ವೈದ್ಯಾಧಿಕಾರಿ ಡಾ| ದಯಾನಂದ ಮಾಳಾಬಗಿ, ಡಾ| ಶಶಿಕಾಂತ ಹೊಸಮನಿ, ಡಾ| ಸಂಜಯ ಜೀರ, ಡಾ| ಲೋಕನಾಥ ಅವಧಾನಿ, ಡಾ| ಆಸೀಫ್ ತಾಳಿಕೋಟಿ ಅವರ ಸಭೆ ನಡೆಸಿ, ಸರ್ಕಾರ ಬಡ ರೋಗಿಗಳ ಅನುಕೂಲಕ್ಕಾಗಿ ಆಯುಷ್ ಆಸ್ಪತ್ರೆಗೆ ಹತ್ತು ಹಲವು ಸೌಲಭ್ಯ ನೀಡುತ್ತಿದೆ. ಹೀಗಾಗಿ ಸರ್ಕಾರದ ಆಯುಷ್ ಆರೋಗ್ಯದ ಸೇವೆಯನ್ನು ಸಮರ್ಪಕವಾಗಿ ತಲುಪಿಸುವಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.