ಛಾಯಾಗ್ರಾಹಕರಿಗೆ ಭದ್ರತೆ ಒದಗಿಸಿ: ತೇಗಲತಿಪ್ಪಿ
Team Udayavani, Aug 20, 2022, 11:26 AM IST
ಕಲಬುರಗಿ: ಒಂದು ಚಿತ್ರ ಸಾವಿರ ಪದಗಳಿಗೆ ಸಮ. ಪದಗಳಲ್ಲಿ ವರ್ಣಿ ಸಲು ಸಾಧ್ಯವಾಗದ ಅದೆಷ್ಟೋ ಮಾತುಗಳನ್ನು ಕೇವಲ ಒಂದು ಚಿತ್ರ ಬಿಡಿಸಿಡುತ್ತದೆ. ಛಾಯಾಗ್ರಾಹಕರು ಸದಾ ಕ್ರಿಯಾಶೀಲರಾಗಿ ಕಾರ್ಯದಲ್ಲಿ ನಿರತರಾಗಿರುತ್ತಾರೆ. ಸಮಾಜ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿರುವ ಛಾಯಾಗ್ರಾಹಕರಿಗೆ ಭದ್ರತೆ ಇಲ್ಲದಂತಾಗಿದೆ. ಅವರ ಭದ್ರತೆಗೆ ಸರಕಾರ ಮುಂದಾಗಬೇಕೆಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಆಗ್ರಹಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ ಉದ್ಘಾಟಿಸಿದರು. ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಶನ್ ಅಧ್ಯಕ್ಷ ಬಸವರಾಜ ತೋಟದ್, ರೈತ ಮುಖಂಡ ಮಲ್ಲಿನಾಥ ಪಾಟೀಲ ಕಾಳಗಿ, ಕಸಾಪ ದಕ್ಷಿಣ ವಲಯ ಅಧ್ಯಕ್ಷ-ಪತ್ರಕರ್ತ ಶಾಮಸುಂದರ ಕುಲಕರ್ಣಿ, ಜಿಲ್ಲಾ ಕಸಾಪ ಸದಸ್ಯರಾದ ಶಿವರಾಜ ಅಂಡಗಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ಪ್ರಮುಖರಾದ ಶಿವಶರಣ ಹಡಪದ, ರವಿಕುಮಾರ ಶಹಾಪುರಕರ್, ಶಿವಕುಮಾರ ಸಿ.ಎಚ್., ವಿಶ್ವನಾಥ ತೊಟ್ನಳ್ಳಿ, ಮಲ್ಲಿನಾಥ ಸಂಗಶೆಟ್ಟಿ, ಸುರೇಶ, ಪ್ರಕಾಶ ಎಂ.ಶೇರಖಾನೆ, ಅನಿಲಕುಮಾರ ಗಣೇಶಕರ್, ಅರುಣಕುಮಾರ ಬಿ.ತೆಗನೂರ ಹಾಗೂ ಛಾಯಾಗ್ರಾಹಕರು, ಸಾಹಿತ್ಯ ಪ್ರೇರಕರು ಭಾಗವಹಿಸಿದ್ದರು.
ಫೋಟೋಗ್ರಾಫಿಯಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿರುವ ಮಲ್ಲಿಕಾರ್ಜುನ ಹಾವಣಿ, ಗಂಗಾರಾಮ ರಾಠೊಡ, ನಂದಕಿಶೋರ ಚವ್ಹಾಣ, ವೆಂಕಟೇಶ ಪುಕಾಳೆ, ಸೋಮನಾಥ ಕಾಳಗಿ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸತ್ಕರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.