ಪ್ರಾಂತ ರೈತ ಸಂಘದಿಂದ ಧರಣಿ
Team Udayavani, Mar 1, 2017, 3:42 PM IST
ಜೇವರ್ಗಿ: ಉದ್ಯೋಗ ಖಾತ್ರಿ ಸಮರ್ಪಕ ಜಾರಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಘಟಕದ ವತಿಯಿಂದ ಮಂಗಳವಾರ ತಹಶೀಲ್ದಾರ ಕಚೇರಿ ಎದುರು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸುಭಾಷ ಹೊಸಮನಿ ಮಾತನಾಡಿ, ತಾಲೂಕಿನ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿ ಮಾಡಬೇಕು. ಕೂಲಿ ದಿನಗಳನ್ನು 250 ದಿನಗಳವರೆಗೆ ಹೆಚ್ಚಿಸುವುದು, ಕೂಲಿ ದರ 300 ರೂ. ನೀಡುವುದು ಹಾಗೂ ಉದ್ಯೋಗ ಖಾತ್ರಿ ಕೆಲಸಕ್ಕಾಗಿ ಅರ್ಜಿ ಹಾಕಿದ ಎಲ್ಲಾ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಬೇಕು. ಇಲ್ಲವೇ ನಿರುದ್ಯೋಗಿ ಭತ್ಯೆ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಸೂಕ್ತ ದಾಖಲೆಗಳೊಂದಿಗೆ ಫಾರಂ ಸಂಖ್ಯೆ 6 ರಲ್ಲಿ ಭರ್ತಿಮಾಡಿಕೊಟ್ಟರೂ ಕೆಲಸ ಕೊಡದೆ ಇರುವ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದರು. ಇದಕ್ಕೂ ಮುನ್ನ ಹಳೆಯ ತಹಶೀಲ ಕಚೇರಿಯಿಂದ ಮಿನಿವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕೂಲಿಕಾರ್ಮಿಕರು ಸರಕಾರದ ವಿರುದ್ಧ ಘೋಷಣೆ ಕೂಗಿದರು.
ವೆಂಕೋಬರಾವ್ ವಾಗಣಗೇರಿ, ಪರಶುರಾಮ ಬಡಿಗೇರ ಸಿದ್ದರಾಮ ಹರವಾಳ, ಕಲ್ಲಪ್ಪ ಡೊಣಿ, ಭೀಮಣ್ಣ ಮಾಗಣಗೇರಿ, ಸಿದ್ದಣ್ಣ ವಾಗಣಗೇರಿ, ಪೀರಪ್ಪ ಯಾತನೂರ, ವಿಠಲ್ ಎಸ್.ಹಟ್ಟಿ, ರೇವಣಸಿದ್ದ ದೊಡ್ಮನಿ, ಸಿದ್ದರಾಮ ಹೂಗಾರ, ತಾಯಪ್ಪ ಹೊಸಮನಿ, ದೇವಿಂದ್ರ ನಡುವಿನಕೇರಿ, ಮಹಾದೇವಪ್ಪ, ಕಾಲೇಸಾಬ, ಧರ್ಮಣ್ಣ ಎನ್. ಬಡಿಗೇರ, ಮಲ್ಲಿಕಾರ್ಜುನ ಬಸವಂತ್ರಾಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.