ಬಿಎಸ್‌ವೈಗೆ 17 ಪ್ರಶ್ನೆ: ಇಂದು ಕಿಸಾನ್ ಘಟಕ ಪ್ರತಿಭಟನೆ
Team Udayavani, Dec 2, 2017, 10:13 AM IST
ಕಲಬುರಗಿ: ರೈತರು ಸೇರಿದಂತೆ ದೇಶದ ಕಾರ್ಮಿಕ ವರ್ಗವನ್ನು ಸಂಕಷ್ಟಕ್ಕೆ ದೂಡಿರುವ ಬಿಜೆಪಿಯಿಂದ ಕರ್ನಾಟಕ
ನವ ನಿರ್ಮಾಣ ಪರಿವರ್ತನಾ ಯಾತ್ರೆ ಕೈಗೊಂಡಿರುವ ಬಿ.ಎಸ್. ಯಡಿಯೂರಪ್ಪ ಅವರಿಗೆ 17 ಪ್ರಶ್ನೆಗಳಿಗೆ
ಖಂಡಿತ ಉತ್ತರ ಹೇಳಿ ಹೋಗಬೇಕು ಎನ್ನುವ ಬೇಡಿಕೆಯೊಂದಿಗೆ ಡಿ. 2ರಂದು ಆಳಂದ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ಲೋಹಾರ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇತಿ ಬಚಾವ್, ಕಿಸಾನ್ ಬಚಾವ್, ಬಿಜೆಪಿ ಹಟಾವ್, ದೇಶ್ ಬಚಾವ್ ಎನ್ನುವ ಘೋಷಣೆಯಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಕಿಸಾನ್ ಘಟಕ, ಅಖೀಲ ಭಾರತ ಕಿಸಾನ್ ಸಭಾ, ಕರ್ನಾಟಕ ಪ್ರಾಂತ ರೈತ ಸಂಘ, ನೇಗಿಲಯೋಗಿ ರೈತ ಒಕ್ಕೂಟ, ದಲಿತ ಹಕ್ಕುಗಳ ಸಮಿತಿ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದರು.
ಕೇಂದ್ರ ಸರ್ಕಾರ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ತರುವುದಾಗಿ ಚುನಾವಣೆ ಸಂದರ್ಭದಲ್ಲಿ ಹೇಳಿತ್ತು.
ಆದರೀಗ ಆ ವರದಿ ಜಾರಿಗೆ ತರಲು ಸಾಧ್ಯವೇ ಇಲ್ಲ ಎಂದು ಸುಪ್ರಿಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ. ಈ ಹಿಂದೆ
ಮನಮೋಹನ್‌ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ರೈತರ ಸಾಲ ಮನ್ನಾ ಮಾಡಿತ್ತು. ಆದಾಗ್ಯೂ, ಕೇಂದ್ರ
ಸರ್ಕಾರವು ರೈತರ ಸಾಲ ಮನ್ನಾ ಮಾಡಿಲ್ಲ. ರೈತರ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಯನ್ನು ಕಡಿತಗೊಳಿಸಲಾಗಿದೆ.
ಅಡಿಕೆ ಬೆಳೆಗಾರರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಕಸ್ತೂರಿರಂಗನ್ ವರದಿಯನ್ನು ಜಾರಿಗೆ ತಂದಿಲ್ಲ.
ಕಪ್ಪು ಹಣ ವಾಪಸ್ಸು ತರುವುದು ಹುಸಿಯಾಗಿದೆ. ನೋಟು ಅಮಾನ್ಯಿಕರಣ ಮಾಡಿದ್ದು ಸರಿಯೇ ಮುಂತಾದ ಎಲ್ಲ ಪ್ರಶ್ನೆಗಳನ್ನು ಯಡಿಯೂರಪ್ಪ ಅವರನ್ನು ಕೇಳಿ ಪ್ರತಿಭಟನೆ ರೂಪಿಸಲಾಗಿದೆ. ಯಡಿಯೂರಪ್ಪ ಯಾತ್ರೆ ವೇಳೆ ಈ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಮೌಲಾ ಮುಲ್ಲಾ, ಶರಣಬಸಪ್ಪ ಮಮಶೆಟ್ಟಿ, ಕಲ್ಯಾಣಿ ತುಕಾಣಿ, ಭೀಮಾಶಂಕರ ಮಾಡ್ಯಾಳ್, ಸೋಮಶೇಖರ ಮುದ್ದಡಗಾ, ಪ್ರಕಾಶ ಜಾನೆ, ರಾಜಕುಮಾರ ಶಿವಮೂರ್ತಿ, ಬಾಲಚಂದ್ರ ಶಿವಮೂರ್ತಿ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.