ರಫೆಲ್ ಯುದ್ಧ ವಿಮಾನ ಖರೀದಿ ಅವ್ಯವಹಾರ ವಿರುದ್ಧ ಹೋರಾಟ
Team Udayavani, Sep 3, 2018, 11:55 AM IST
ಕಲಬುರಗಿ: ಕೇಂದ್ರ ಸರ್ಕಾರವು ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ 41 ಸಾವಿರ ಕೋಟಿ ರೂ.ಗಳನ್ನು ಬೊಕ್ಕಸಕ್ಕೆ ಹಾನಿ ಮಾಡಿದ್ದಲ್ಲದೇ, ಅವ್ಯವಹಾರ ಎಸಗಿದೆ. ಅಲ್ಲದೆ ಇತರೆ ಜನವಿರೋಧಿ ನೀತಿಗಳನ್ನು ಹಮ್ಮಿಕೊಂಡಿದೆ.
ಇವೆಲ್ಲವುಗಳ ವಿರುದ್ದ ಯುವ ಕಾಂಗ್ರೆಸ್ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಯುವ ಘಟಕದ ಪದಾಧಿಕಾರಿಗಳು ತಿಳಿಸಿದರು. ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಯುವ ಘಟಕದ ಸಭೆಯಲ್ಲಿ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ನಡೆದ ಅವ್ಯವಹಾರ ಕುರಿತಾದ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ ಪದಾಧಿಕಾರಿಗಳು ಇದೇ ವೇಳೆ ಹೋರಾಟದ ನಿರ್ಧಾರವನ್ನು ಪ್ರಕಟಿಸಿದರು.
ಕೇಂದ್ರ ರಕ್ಷಣಾ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ರಫೆಲ್ ವಿಮಾನ ಖರೀದಿ ಮಾಡಲಾಗಿದೆ. ಈ ಕುರಿತು ಸಂಸತ್ತು ಹಾಗೂ ರಾಜ್ಯಸಭೆಯಲ್ಲೂ ವಿಪಕ್ಷ ಕಾಂಗ್ರೆಸ್ ಪ್ರಶ್ನೆ ಕೇಳಿದ್ದಲ್ಲದೇ ವಾಗ್ಧಾಳಿ ನಡೆಸಿದ್ದರೂ ಪ್ರಧಾನಿಯಾಗಲಿ, ರಕ್ಷಣಾ ಸಚಿವರಾಗಲಿ ಬಾಯಿ ಬಿಟ್ಟಿಲ್ಲ. ಈ ವಿಷಯವನ್ನು ಜನತೆ ಮುಂದಿಡಲು ಯುವ ಕಾಂಗ್ರೆಸ್ ಹೋರಾಟಕ್ಕೆ ಇಳಿದಿದೆ ಎಂದು ಯುವ ಘಟಕದ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ ತಿಳಿಸಿದರು.
ಹಿಂದಿನ ಸರ್ಕಾರ 126 ವಿಮಾನಗಳನ್ನು ಖರೀದಿಸಲು ನಿರ್ಧರಿಸಿತ್ತು. ಆದರೆ ಈಗಿನ ಕೇಂದ್ರ ಸರ್ಕಾರ ಏಕಾಏಕಿ ರಕ್ಷಣಾ ಇಲಾಖೆಯ ಎಲ್ಲ ನಿಯಮ ಉಲ್ಲಂಘಿಸಿ ದುಬಾರಿ ದರದಲ್ಲಿ ಒಂದೊಂದು ವಿಮಾನಕ್ಕೆ 529 ಕೋ.ರೂ.
ನೀಡಿ 36 ವಿಮಾನಗಳನ್ನು ಪಡೆದಿರುವುದು ಹಾಗೂ ಯಾವುದೇ ಅನುಭವ ಇಲ್ಲದ ಅನೀಲ ಅಂಬಾನಿಯ ರಿಲಾಯನ್ಸ್ ಕಂಪನಿಗೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದೊಂದು ರಕ್ಷಣಾ ಇಲಾಖೆಯಲ್ಲಿ ದೊಡ್ಡ ಭ್ರಷ್ಟಾಚಾರವಾಗಿದೆ ಎಂದು ಆರೋಪಿಸಿದರು.
ಎಲ್ಲ ತಾಲೂಕು ಕೇಂದ್ರಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಈ ಕುರಿತು ಮನವಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಮುಖಂಡರಾದ ಡಾ| ಕಿರಣ ದೇಶಮುಖ, ಸಂತೋಷ ದಣ್ಣೂರ, ಮಜಹರ್ ಅಲ್ಲಂಖಾನ್, ಪ್ರವೀಣ ಪಾಟೀಲ ಹರವಾಳ, ಪ್ರಶಾಂತ ಮಾಲಿಪಾಟೀಲ, ಚೇತನ ಸೋಮಶೇಖರ ಗೋನಾಯಕ, ಫಾರುಕ್ ಮನಿಯಾರ್, ವಿಶಾಲ ಪಾಟೀಲ, ಶಿವಾನಂದ ಹೊನಗುಂಟಿ, ಶರಣು ವಾರದ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.