ರಾಹುಲ್ ಕಾರ್ಯಕ್ರಮಕ್ಕೆ ಲಕ್ಷ ಜನ ಸೇರುವ ನಿರೀಕ್ಷೆ
Team Udayavani, Mar 16, 2019, 6:13 AM IST
ಕಲಬುರಗಿ: ಕಳೆದ ಫೆಬ್ರುವರಿ ಮೊದಲ ವಾರದಲ್ಲಿ ನಗರಕ್ಕೆ ಬಂದು ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಕಹಳೆ ಮೊಳಗಿಸಿದ ನಂತರ ಅಖೀಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 18ರಂದು ಕಲಬುರಗಿಗೆ ಆಗಮಿಸುತ್ತಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ರಾಜ್ಯದ ಮೊದಲ ಚುನಾವಣಾ ಭಾಷಣ ರ್ಯಾಲಿ ಇದಾಗಿದ್ದು, ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರ ಕಲಬುರಗಿಯಿಂದ ಕಹಳೆ ಮೊಳಗಿಸಲಿದ್ದಾರೆ. ಇದಕ್ಕಾಗಿ ಸಿದ್ಧತೆಗಳು ನಡೆದಿವೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.18ರಂದು ಬೆಳಗ್ಗೆ 11:30 ಗಂಟೆಗೆ ನಡೆಯುವ ಕಾಂಗ್ರೆಸ್ ಪಕ್ಷದ ರ್ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಇನ್ನಿತರ ನಾಯಕರು ಭಾಗಿಯಾಗಲಿದ್ದಾರೆ.
ತದನಂತರ 1:30ಕ್ಕೆ ಬೆಂಗಳೂರಿಗೆ ತೆರಳಿ ಅಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಪಾಲ್ಗೊಳ್ಳುವರು. ಹೈದರಾಬಾದ್‌ನಿಂದ ಹೆಲಿಕಾಪ್ಟರ್ ಮೂಲಕ ಕಲಬುರಗಿಗೆ ಆಗಮಿಸಲಿದ್ದಾರೆ. ರಾಹುಲ್ ಗಾಂಧಿ ಆಗಮನದೊಂದಿಗೆ ಕಾಂಗ್ರೆಸ್ ಪ್ರಚಾರಕ್ಕೆ ರಾಜ್ಯದಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿತ್ತು,ಆದರೆ ಬೆಳಗ್ಗೆಯೇ ಕಲಬುರಗಿಯಲ್ಲಿ ಕಾರ್ಯಕ್ರಮ ನಡೆಸಲು ಮುಖಂಡರು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ, ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಸಂಸದರು, ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಕಲಬುರಗಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಕನಿಷ್ಠ ಒಂದು ಲಕ್ಷಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಶುಕ್ರವಾರ ಸಂಜೆ ಖಂಡ್ರೆ ಸಭೆ: ಮಾ.18 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾ.16ರಂದು ಸಂಜೆ 5 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಪೂರ್ವ ಸಿದ್ಧತಾ ಸಭೆ ಕರೆಯಲಾಗಿದೆ. ಸಭೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷರು ಸಿದ್ಧತೆಗಳ ಬಗ್ಗೆ ಚರ್ಚಿಸುವರು. ಜತೆಗೆ ಪಕ್ಷದ ಮುಖಂಡರೊಂದಿಗೆ ಸಮಾಲೋಚಿಸುವರು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಪ್ರಚಾರ ಸಮಿತಿ ಅಧ್ಯಕ್ಷ ಜಗನ್ನಾಥ ಗೋಧಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ, ಮುಖಂಡರಾದ ಸಿ.ಬಿ. ಪಾಟೀಲ ಓಕಳಿ, ತಿಪ್ಪಣ್ಣಪ್ಪ ಕಮಕನೂರ, ಜಿಪಂ ಪ್ರತಿಪಕ್ಷದ ನಾಯಕ ಶಿವಾನಂದ ಪಾಟೀಲ, ಯುವ ಘಟಕದ ಅಧ್ಯಕ್ಷ ಈರಣ್ಣ ಝಳಕಿ ಹಾಗೂ ಮುಂತಾದವರಿದ್ದರು.
ಚಿತ್ತಾಪುರದ ಜನರ ಆಶೀರ್ವಾದವಿ¨ ಚಿಂಚೋಳಿ ಕ್ಷೇತ್ರಕ್ಕೆ ಬಂದು ಚುನಾವಣೆಗೆ ನಿಂತು ಗೆದ್ದು ತೋರಿಲಿ ಎಂದು ಡಾ| ಉಮೇಶ ಜಾಧವ ಸವಾಲು ಹಾಕಿರುವುದಕ್ಕೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಚಿತ್ತಾಪುರ ಕ್ಷೇತ್ರದ ಜನರು ನನಗೆ ಆರ್ಶೀವಾದ ಮಾಡಿದ್ದಾರೆ. ಅಲ್ಲಿ ನಾನು ಸುಖವಾಗಿದ್ದೇನೆ. ಚಿಂಚೋಳಿಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಉದ್ಬವಿಸಲ್ಲ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂದು ಸುದ್ದಿ ಹಬ್ಬಿಸಲಾಗಿತ್ತು. ಇಷ್ಟಕ್ಕೂ ಚಿಂಚೋಳಿಯಲ್ಲಿ ನಾಯಕರ ಕೊರತೆಯಿಲ್ಲ. ಸಾಕಷ್ಟು ಜನರಿದ್ದಾರೆ. ಅವರೇ ಸೇರಿ ಮುಂದಿನ ದಿನಗಳಲ್ಲಿ ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ತಮ್ಮದೇನಿದ್ದರೂ ಅಭಿವೃದ್ಧಿ ಕೆಲಸಗಳ ಮೇಲೆ ಚುನಾವಣೆ ನಡೆಯುವುದು. ಮತದಾರರು ಕೈ ಬಿಡಲ್ಲ ಎನ್ನುವ ವಿಶ್ವಾಸವಿದೆ. ಬಣ್ಣದ ಮಾತುಗಳಿಗೆ ಜನರು ಮರಳಾಗುವುದಿಲ್ಲ. ಚುನಾವಣೆ ಸಮಯದಲ್ಲಿ ಟೀಕೆ-ಟಿಪ್ಪಣಿಗಳು ಬರುತ್ತಲೇ ಇರುತ್ತವೆ. ಸಮುದಾಯ
ಅಸಮಾಧಾನ ಎಂಬ ವರದಿಗಳು ಬರುತ್ತಿರುತ್ತವೆ.
ಪ್ರಿಯಾಂಕ್ ಖರ್ಗೆ, ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.