ಮಳೆಗೆ ಹದಗೆಟ್ಟ ರಸ್ತೆ: ಸಂಚಾರಕ್ಕೆ ಅಡ್ಡಿ
Team Udayavani, Aug 9, 2022, 4:12 PM IST
ಚಿಂಚೋಳಿ: ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅನೇಕ ಗ್ರಾಮಗಳಲ್ಲಿ ರಸ್ತೆಗಳು ಹದಗೆಟ್ಟಿರುವುದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
ತಾಲೂಕಿನಲ್ಲಿ ಆರ್ಭಟದಿಂದ ಮಳೆಗೆ ಜನರು ತತ್ತರಿಸಿದ್ದಾರೆ. ರೈತರ ಹೊಲದಲ್ಲಿ ಬೆಳೆದು ನಿಂದ ಉದ್ದು, ಹೆಸರು, ತೊಗರಿ, ಸೋಯಾ, ಸಜ್ಜೆ, ಮೆಕ್ಕೆಜೋಳ ಅಲ್ಲದೆ ತರಕಾರಿ ಬೆಳೆಗಳು ಟೊಮ್ಯಾಟೋ, ಉಳ್ಳಾಗಡ್ಡಿ, ಅರಶಿಣ, ಶುಂಠಿ ಬೆಳೆಗಳು ನೀರಿನಲ್ಲಿ ಕೊಳೆಯುತ್ತಿವೆ. ಅನೇಕ ಗ್ರಾಮದಲ್ಲಿ ಹೆಸರು ಬೆಳೆ ಹೂವು ಕಾಯಿ ಆಗುತ್ತಿದೆ. ಆದರೆ ಮಳೆಯ ಬಿರುಸಾದ ಹನಿಗಳಿಂದ ಹೂವು ಉದುರಿ ಹೋಗುತ್ತಿದೆ. ಇದರಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ ರೈತರ ಪರಿಸ್ಥಿತಿ.
ರವಿವಾರ ಮತ್ತು ಸೋಮವಾರ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೆಳದಂಡೆ ಮುಲ್ಲಾಮಾರಿ ಜಲಾಶಯ ಮತ್ತು ಚಂದ್ರಂಪಳ್ಳಿ ಜಲಾಶಯ ಸಂಪೂರ್ಣವಾಗಿ ತುಂಬಿ ತುಳುಕುತ್ತಿವೆ ಹೆಚ್ಚಿನ ಪ್ರಮಾಣದಲ್ಲಿ ನೀರು ಮುಲ್ಲಾಮಾರಿ ನದಿಗೆ ಹರಿದು ಬಿಡಲಾಗುತ್ತಿದೆ. ತಾಲೂಕಿನಲ್ಲಿ ಮಳೆ ಅಬ್ಬರಕೆ ರೈತರ ಕಂಗಾಲಾಗಿ ಹೋಗಿದ್ದಾರೆ. ಜನಜೀವನ ಅಸ್ತವ್ಯಸ್ಥವಾಗಿದೆ. ಅಲ್ಲದೆ ಸಣ್ಣ ನೀರಾವರಿ ಕೆರೆಗಳು ಭರ್ತಿಯಾಗಿ ಕೋಡಿಗಳ ಮೂಲಕ ನೀರು ಹರಿದು ಹೋಗುತ್ತಿವೆ. ನದಿ ಹಳ್ಳಕೊಳ್ಳಗಳು ರಭಸವಾಗಿ ಹರಿಯುತ್ತಿದೆ.
ತಾಲೂಕಿನಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ 213 ಮನೆಗಳು ಹಾನಿಯಾಗಿವೆ. 5 ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ಇಬ್ಬರು ಸಿಡಿಲಿಗೆ ಮೃತಪಟ್ಟಿದ್ದಾರೆ. 12,844 ಹೆಕ್ಟರ ಬೆಳೆ ಹಾನಿಯಾಗಿದೆ ಹಾಗೂ 17.1ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತಹಶೀಲ್ದಾರ್ ಅಂಜುಮ ತಬಸುಮ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.