ನಾಳೆ ಸಿಎಂ ಯಡಿಯೂರಪ್ಪರಿಂದ 50 ಕೋ.ರೂ ಬೆಳೆಸಾಲ ವಿತರಣೆ: ತೇಲ್ಕೂರ

Team Udayavani, Jul 8, 2021, 3:13 PM IST

ನಾಳೆ ಸಿಎಂ ಯಡಿಯೂರಪ್ಪರಿಂದ 50 ಕೋ.ರೂ ಬೆಳೆಸಾಲ ವಿತರಣೆ: ತೇಲ್ಕೂರ

ಕಲಬುರಗಿ: ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ( ಡಿಸಿಸಿ) ಬ್ಯಾಂಕ್ ನ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಜುಲೈ 10ರಂದು 10 ಸಾವಿರ ರೈತರಿಗೆ 50 ಕೋ.ರೂ ಬೆಳೆಸಾಲ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್ ನ ಅಧ್ಯಕ್ಷರಾಗಿರುವ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು.

ನಗರದ ಡಾ. ಎಸ್.ಎಂ ಪಂಡಿತ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 50 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 10ಸಾವಿರ ರೈತರಿಗೆ 50 ಕೋ.ರೂ ಸಾಲ ವಿತರಿಸಲಿದ್ದು, ಸಾಂಕೇತಿಕವಾಗಿ ರೈತರಿಗೆ ವಿತರಿಸಿ ಚಾಲನೆ ನೀಡುವರು. ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ ಅವರೂ ಪಾಲ್ಗೊಳ್ಳುವರು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಸಕ್ತ ಸಾಲಿನ ಬೆಳೆಸಾಲ ವಿತರಣೆಗೆ ಚಾಲನೆ ನೀಡಲಾಗಿದ್ದು, ಮುಂದಿನ ತಿಂಗಳು ಅಂತ್ಯದೊಳಗೆ ಒಂದು ಲಕ್ಷ ಹೊಸ ರೈತರಿಗೆ 200 ಕೋ.ರೂ ಸಾಲ ವಿತರಿಸಲು ಗುರಿ ಹೊಂದಲಾಗಿದೆ. ಅಪೆಕ್ಸ್ ಬ್ಯಾಂಕ್ ನೀಡಿರುವ 200 ಕೋ.ರೂ ಸಾಲವನ್ನು ಇಲ್ಲಿಯವರೆಗೆ ಸಾಲ ಪಡೆಯದಿರುವ ಹೊಸ ರೈತರಿಗೆ ಸಾಲ ನೀಡಲಾಗುತ್ತಿದೆ. ನಬಾರ್ಡ್ ದಿಂದ ಪಡೆಯಲಿರುವ  450 ಕೋ ರೂ ಪಡೆದ ನಂತರ ಸಾಲ ಮನ್ನಾದ ರೈತರಿಗೂ ಸಾಲ ವಿತರಿಸಲಾಗುವುದು.  2022ರ ಮಾಚ್೯ ಅಂತ್ಯದೊಳಗೆ ರೈತರಿಗೆ ಬೆಳೆಸಾಲದ ಜತೆಗೆ ತೋಟಗಾರಿಕೆ, ಹೈನುಗಾರಿಕೆ, ಕುರಿ ಸಾಕಾಣಿಕೆ ಸೇರಿ ಇತರ ವಾಣಿಜ್ಯ ಚಟುವಟಿಕೆಗಳು ಸೇರಿ ಒಟ್ಟಾರೆ 1000 ಕೋ.ರೂ ಡಿಸಿಸಿ ಬ್ಯಾಂಕ್ ನಿಂದ ವಿತರಿಸಲು ಉದ್ದೇಶಿಸಲಾಗಿದೆ ಎಂದು ತೇಲ್ಕೂರ ವಿವರಿಸಿದರು.

ಕಳೆದೆರಡು ವರ್ಷದಿಂದ ರೈತರಿಗೆ ಸಾಲ ಹಂಚದಿರುವುದನ್ನು ಮನಗಂಡು ತಾವು ಅಧ್ಯಕ್ಷರಾದ ನಂತರ ಸರ್ಕಾರದಿಂದ 10 ಕೋ.ರೂ ಷೇರು ತರಲಾಗಿದೆ. ಬಹು ಮುಖ್ಯವಾಗಿ 80 ಕೋ.ರೂ ಠೇವಣಿ ತರಲಾಗಿದೆ. ಸುಸ್ತಿ ಸಾಲ ವಸೂಲಾತಿಯಲ್ಲಿ ಗಣನೀಯ ಸಾಧನೆ ತೋರಲಾಗಿದ್ದು, 250 ಕೋ.ರೂ ದಲ್ಲಿ 150 ಕೋ.ರೂ ವಸೂಲಿ ಮಾಡಲಾಗಿದೆ. ಹೀಗೆ ಹಲವು ಹಂತದಲ್ಲಿ ಬ್ಯಾಂಕ್ ನ ಪುನಶ್ಚೇತನಕ್ಕೆ ಹಗಲಿರಳು ಶ್ರಮಿಸಲಾಗಿದೆ. ಇದಕ್ಕೆಲ್ಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಹಕಾರ ಸಚಿವ ಎಸ್. ಟಿ.‌ಸೋಮಶೇಖರ ಹಾಗೂ ಬ್ಯಾಂಕ್ ನ ಆಡಳಿತ ಮಂಡಳಿ ಸಹಕಾರ – ಬೆಂಬಲ ಕಾರಣವಾಗಿದೆ ಎಂದು ಶಾಸಕ ರಾಜಕುಮಾರ ತಿಳಿಸಿದರು.

ತಾವು ಅಧ್ಯಕ್ಷರಾದ ನಂತರ ಕೈಗೊಂಡ ಸುಧಾರಣೆ ಕ್ರಮದಿಂದ ರಾಜ್ಯದಲ್ಲಿ 21 ನೇ ಸ್ಥಾನದಲ್ಲಿದ್ದ ಕಲಬುರಗಿ ಡಿಸಿಸಿ ಬ್ಯಾಂಕ್ ಈಗ 11 ನೇ ಸ್ಥಾನ ಕ್ಕೆ ಬಂದು ನಿಂತಿದೆ. 2022ರ ಮಾರ್ಚ್ ಅಂತ್ಯದೊಳಗೆ ಟಾಪ್ ಮೂರರೊಳಗೆ ಬರಲು ಶ್ರಮಿಸಲಾಗುವುದು ಎಂದು ಪ್ರಕಟಿಸಿದರು.

ಗ್ರಾಮ ಪಂಚಾಯಿತಿ ಗೊಂದು ಸಂಘ:  ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ರಚಿಸಲು ಉದ್ದೇಶಿಸಲಾಗಿ, ಈಗಾಗಲೇ ಸಹಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. 4000 ಎಕರೆ ಭೂಮಿ 300 ರೈತರಿದ್ದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗಳ ರಚನೆ ಮೂಲಕ ಒಟ್ಟಾರೆ ಮೂರು ಲಕ್ಷ ರೈತರಿಗೆ ಸಾಲ ವಿತರಿಸಲು ಗುರಿ ಹೊಂದಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಮಧ್ಯಾಮವಧಿ ಸಾಲ ವಸೂಲಾತಿಗೆ ಕ್ರಮ: ಅಸಲು 40 ಕೋ. ಹಾಗೂ ಇದರ ಬಡ್ಡಿ ಸೇರಿ ಅಂದಾಜು 80 ಕೋ.ರೂ ಮಧ್ಯಾಮವಧಿ ಸಾಲ ವಸೂಲಾತಿಗೆ ಬ್ಯಾಂಕ್ ನ ಆಡಳಿತ ಮಂಡಳಿ ದೃಢ ಹೆಜ್ಜೆ ಇಟ್ಟಿದ್ದು, ಈಗಾಗಲೇ 700 ರೈತರಿಗೆ ನೊಟೀಸ್ ನೀಡಲಾಗಿದೆ. ಇದು ರಾಜ್ಯದಲ್ಲೇ ಮೊದಲ ಪ್ರಯತ್ನವಾಗಿದೆ ಎಂದು ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು.

ಬ್ಯಾಂಕ್ ನ ಉಪಾಧ್ಯಕ್ಷ ಸುರೇಶ ಸಜ್ಜನ, ನಿರ್ದೇಶಕರಾದ ಶರಣಬಸಪ್ಪ ಪಾಟೀಲ್ ಅಷ್ಠಗಾ, ಶಿವಾನಂದ ಮಾನಕರ್, ಚಂದ್ರಶೇಖರ ತಳ್ಳಳ್ಳಿ, ಎಂಡಿ ಚಿದಾನಂದ ನಿಂಬಾಳ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.