ರಂಭಾಪುರಿ ಶ್ರೀ ಅವಹೇಳನ; ವ್ಯಕ್ತಿ ಬಂಧನ
Team Udayavani, Nov 29, 2018, 6:25 AM IST
ಕಲಬುರಗಿ: ರಂಭಾಪುರಿ ಜಗದ್ಗುರುಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಜೇವರ್ಗಿ ಕಾಲೋನಿಯ ಅಯ್ಯಣಗೌಡ ಪಾಟೀಲ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ರಂಭಾಪುರಿ ಜಗದ್ಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ. ಅದನ್ನು ಖಂಡಿಸಿ ವೀರಶೈವ-ಲಿಂಗಾಯತ ಸಮನ್ವಯ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಂಧಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರಾರಿಯಾಗಿದ್ದ ಆರೋಪಿ, ಅಯ್ಯಣಗೌಡನನ್ನು ಬುಧವಾರ ಬಂಧಿಸಿ, ನ್ಯಾಯಾಂಗ ವಶಕ್ಕೊಪ್ಪಿಸಲಾಗಿದೆ ಎಂದು ಎಸ್ಪಿ ಎನ್.ಶಶಿಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.