ನಾಳೆ ಸಿದ್ದರಾಮೇಶ್ವ ರ ದೇಗುಲ ಉದ್ಘಾ ಟನೆ
Team Udayavani, Jul 6, 2021, 6:34 PM IST
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಘೂಳನೂರು ಗ್ರಾಮದಲ್ಲಿ ಜು.7ರಂದು ಮಧ್ಯಾಹ್ನ 2 ಗಂಟೆಗೆ ಶ್ರೀಗುರು ಸಿದ್ದರಾಮೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಕಳಸಾರೋಹಣ ಸಮಾರಂಭ ನಡೆಯಲಿದೆ ಎಂದು ಜಿಪಂ ಮಾಜಿ ಸದಸ್ಯ ಅರುಣಕುಮಾರ ಎಂ.ವೈ.ಪಾಟೀಲ್ ತಿಳಿಸಿದರು.
ಶ್ರೀಶೈಲ ಸಾರಂಗ ಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಮತ್ತು ಸೊನ್ನದ ವಿರಕ್ತ ಮಠದ ಡಾ.ಶಿವಾನಂದ ಸ್ವಾಮಿಗಳ ಸಮ್ಮುಖದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 900 ವರ್ಷಗಳ ಹಿಂದೆ ಸಿದ್ದರಾಮೇಶ್ವರರು ಇಲ್ಲಿಗೆ ಬಂದು ತಪಸ್ಸು ಮಾಡಿದ್ದರು. ಶ್ರೀಗಳು ಮತ್ತು ಭಕ್ತರ ಆಪೇಕ್ಷೆ ಮೇರೆಗೆ ದೇವಸ್ಥಾನ ನಿರ್ಮಿಸಲಾಗಿದೆ ಎಂದರು. ದೇವಸ್ಥಾನದ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಸಾನ್ನಿಧ್ಯವನ್ನು ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮಿಗಳು ಮತ್ತು ನೇತೃತ್ವವನ್ನು ಡಾ.ಶಿವಾನಂದ ಸ್ವಾಮಿಗಳ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ದೇವಸ್ಥಾನ ಉದ್ಘಾಟಿಸುವರು.
ನೂತನ ಗೋಪುರದ ಕಳಸಾರೋಹಣವನ್ನು ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ನೆರವೇರಿಸುವರು. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಚಿವ ಬಿ.ಶೀÅರಾಮುಲು, ವಿಧಾನ ಪರಿಷತ್ ಸದಸ್ಯರಾದ ಜಿ.ಪಾಟೀಲ್, ಶಶೀಲ್ ನಮೋಶಿ, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಚಂದು ಪಾಟೀಲ್, ಜಿಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ, ಉದ್ಯಮಿ ಅಶೋಕ ಗುತ್ತೇದಾರ ಬಡದಾಳ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ವಿವರಿಸಿದರು.
ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಬಸವಾದಿ ಶರಣು ನಡೆದಾಡಿದ ನೆಲ ಇದು. ಘೂಳನೂರು ಐತಿಹಾಸಿಕ ಮಹ್ವತವನ್ನು ಹೊಂದಿದ ಸ್ಥಳ. ಇಲ್ಲಿನ ಭಕ್ತರು ಮತ್ತು ಸರ್ಕಾರ ನೆರವಿನೊಂದಿಗೆ 55 ಲಕ್ಷ ರೂ. ವೆಚ್ಚದಲ್ಲಿ ಸಿದ್ದರಾಮೇಶ್ವರ ದೇವಾಲಯ ನಿರ್ಮಿಸಲಾಗಿದೆ. ಗೋಪುರಕ್ಕೆ 9 ಲಕ್ಷ ರೂ. ವ್ಯಯಿಸಲಾಗಿದೆ ಎಂದರು. ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಆರು ಜನ ಸಾಧಕರಿಗೆ “ಸುಲಫಲ ಶ್ರೀ’ ಮತ್ತು “ಬಸವ ಶ್ರೀರಕೆ’Ò ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.