ರಾಷ್ಟ್ರಕೂಟರ ಉತ್ಸವ: ಕ್ಷಣಗಣನೆ ಆರಂಭ
Team Udayavani, Mar 4, 2018, 11:12 AM IST
ಕಲಬುರಗಿ: ಸೇಡಂ ತಾಲೂಕು ಮಳಖೇಡನಲ್ಲಿ ಮಾರ್ಚ್ 4 ಮತ್ತು 5ರಂದು ನಡೆಯಲಿರುವ ರಾಷ್ಟ್ರಕೂಟ ಉತ್ಸವದ ಪೂರ್ವಸಿದ್ದತಾ ಕಾರ್ಯಗಳು ಬಹುತೇಕ ಪೂರ್ಣಗೊಂಡಿದ್ದು, ಕ್ಷಣಗಣನೆ ಆರಂಭವಾಗಿದೆ.
ಇದೇ ವೇಳೆ ಉತ್ಸವವನ್ನು ಆಕರ್ಷಣೀಯಗೊಳಿಸಲು ಮಳಖೇಡ ಕೋಟೆಯಲ್ಲಿ ಕನ್ನಡದ ಪ್ರಥಮ ಉಪಲಬ್ಧ ಗ್ರಂಥ ಶ್ರೀ ವಿಜಯ ರಚಿಸಿದ ಕವಿರಾಜ ಮಾರ್ಗ ಪುಸ್ತಕದ ಪ್ರತಿರೂಪವನ್ನು ಗ್ರಾನೈಟ್ ಸೃಷ್ಟಿಸಲಾಗಿದೆ. ಇದು ಕೋಟೆಯಲ್ಲಿ ಅತ್ಯಾಕರ್ಷಣೆ ಕೇಂದ್ರವಾಗಿದೆ. ಎರಡು ದಿನಗಳ ಕಾಲ ಕೋಟೆ ದೀಪಾಲಂಕಾರದಿಂದ ಕಂಗೊಳಿಸಲಿದೆ. ಇದು ನೋಡುಗರ ಗಮನ ಸೆಳೆಯಲಿದೆ.
ಉತ್ಸವ ನಡೆಯುವ ಕಲಬುರಗಿ-ಸೇಡಂ ರಸ್ತೆಯಲ್ಲಿರುವ ಆವರಣ ಮತ್ತು ಕೋಟೆಯಲ್ಲಿ ಕಾರ್ಮಿಕರಿಂದ ಸ್ವತ್ಛತಾ ಕಾರ್ಯ ಭರದಿಂದ ಸಾಗಿದೆ. ಹೈದರಾಬಾದಿನ ಸಂಸ್ಥೆ ಉತ್ಸವದ ಮುಖ್ಯ ವೇದಿಕೆಯನ್ನು 80*40 ಅಡಿಯಲ್ಲಿ ಹಾಗೂ ಸಾರ್ವಜನಿಕರ ಕುಳಿತುಕೊಳ್ಳುವ ಪ್ರತ್ಯೇಕ ವಾಟರ್ ಪ್ರೂಫ್ ಟೆಂಟ್ ನಿರ್ಮಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ವತ್ಛತೆ, ಕುಡಿಯುವ ನೀರು ಮತ್ತು ಶೌಚಾಲಯಕ್ಕೆ
ವ್ಯವಸ್ಥೆ ಕಲ್ಪಿಸಲಾಗಿದೆ. ಕರಕುಶಲ ವಸ್ತುಗಳು, ಸಿರಿಧಾನ್ಯ, ಕಲೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ದರ್ಶನಕ್ಕಾಗಿ ಮಳಿಗೆ ಸ್ಥಾಪಿಸಲಾಗಿದೆ.
ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಉತ್ಸವದ ಸಂಘಟನಾ ಸಮಿತಿ ಅಧ್ಯಕ್ಷ ದೊಡ್ಡಬಸವರಾಜ ಅವರು, ಮಾರ್ಚ್ 4ರಂದು ಬೆಳಗ್ಗೆ 9:00ಕ್ಕೆ ಮಳಖೇಡ ಕೋಟೆಯಿಂದ ಉತ್ಸವದ ಮೆರವಣಿಗೆ ಪ್ರಾರಂಭಗೊಂಡು ವೇದಿಕೆಗೆ ಸಂಪನ್ನಗೊಳ್ಳಲಿದೆ.
ನಂತರ 11:00ಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಉತ್ಸವದ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಉತ್ಸವಕ್ಕೆ ಸ್ಥಳೀಯ ಗ್ರಾಮಸ್ಥರು ಸೇರಿದಂತೆ ಸೇಡಂ ತಾಲೂಕು ಮತ್ತು ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ಮತ್ತು ಸಾರ್ವಜನಿಕರನ್ನು ಮುಕ್ತ ಆಹ್ವಾನ
ನೀಡಿಲಾಗಿದ್ದು, ಸುಮಾರು 10 ರಿಂದ 15 ಸಾವಿರ ಜನ ಬರುವ ನಿರೀಕ್ಷೆಯಿದೆ. ಸಾರ್ವಜನಿಕರಿಗಾಗಿ 8000 ಆಸನದ ವ್ಯವಸ್ಥೆ ಮತ್ತು ಊಟದ ವ್ಯವಸ್ಥೆ ಸಹ ಮಾಡಲಾಗಿದೆ. ಎರಡು ದಿನಗಳ ಕಾಲ ವರೆಗೆ ಕವಿ ಗೋಷ್ಠಿ, ಗೀತ ಗಾಯನ, ನಾಟಕ ಕಾರ್ಯಕ್ರಮಗಳು ಸ್ಥಳೀಯ ಹಾಗೂ ನಾಡಿನ ವಿವಿಧ ಕಲಾವಿದರಿಂದ ನಡೆಯಲಿದ್ದು, ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ, ಖ್ಯಾತ ಸಂಗೀತ ನಿರ್ದೇಶಕರಾದ ನವೀನ ಸಜ್ಜು, ಅನೂಪ ಸಿಳೀನ್, ಅರ್ಜುನ ಜನ್ಯ, ನಿರೂಪಣೆ ಖ್ಯಾತಿಯ ಅನುಶ್ರೀ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದಾರೆ ಎಂದರು. ಆಹಾರ ಇಲಾಖೆ ಉಪನಿರ್ದೇಶಕ ಅರುಣ ಕುಮಾರ, ಗ್ರಾಮದ ಮುಖಂಡ ಕಲ್ಯಾಣಪ್ಪ ಪಾಟೀಲ ಸೇರಿದಂತೆ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.