ರಾಯರಡ್ಡಿ ದೇಶದ ಜನತೆ ಕ್ಷಮೆ ಕೇಳಲಿ
Team Udayavani, Apr 23, 2017, 3:39 PM IST
ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಕೂಡಲೇ ದೇಶದ ಜನತೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡಬೇಕು ಎಂದು ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಸಚಿವರ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಡಿದರು.
ರಾಯರಡ್ಡಿ ತುಂಬಾ ತಿಳಿವಳಿಕೆ ಇರುವವರು ಎಂದು ತಿಳಿಯಲಾಗಿತ್ತು. ಅಮೆರಿಕದಂತಹ ರಾಷ್ಟ್ರದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಕೊಡುವಾಗ ದೇಶದ ಕರ್ನಾಟಕದ ಉನ್ನತ ಶಿಕ್ಷಣ ಸಚಿವರಾಗಿದ್ದುಕೊಂಡು ಪ್ರಧಾನಿ ಸತ್ತರೆ ಸಾಯಲಿ ಬಿಡಿ ಎನ್ನುವಂತೆ ಮಾತನಾಡಿರುವುದು ಶೋಭೆ ತರುವ ವಿಚಾರವಲ್ಲ.
ಆದ್ದರಿಂದ ಕೂಡಲೇ ದೇಶದ ಜನತೆ ಕ್ಷಮೆ ಕೇಳಬೇಕು ಇಲ್ಲವೇ ರಾಜೀನಾಮೆ ನೀಡಬೇಕು ಎಂದು ಯುವ ಕಾರ್ಯಕರ್ತರು ಆಗ್ರಹಿಸಿದರು. ಈ ವೇಳೆ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಹಾನಗರ ಜಿಲ್ಲಾಧ್ಯಕ್ಷ ಮಲ್ಲು ಉದನೂರು, ರಾಜ್ಯ ಮೋರ್ಚಾ ಉಪಾಧ್ಯಕ್ಷ ಪರಶುರಾಮ ನಸಲವಾಯು,
ಜಿಲ್ಲಾ ಕಾರ್ಯದರ್ಶಿ ಸಂತೋಷ ಹಾದಿಮನಿ, ರಾಜ್ಯ ಕಾರ್ಯಕಾರಣಿ ಸದಸ್ಯ ಶರಣು ಸಜ್ಜನ್, ಕೈಲಾಶ ಪಾಟೀಲ ಅಂಕಲಗಿ, ಪ್ರವೀಣ ನಾಯಕ, ನಾಗರಾಜ ಉಪಾಸೇ, ಶ್ರೀಧರ ಚವ್ಹಾಣ, ಸುನೀಲ ಮಹಾಗಾಂವ, ಯಲ್ಲಾಲಿಂಗ ಪೂಜಾರಿ, ಸಚೀನ್ ನಿಗ್ಗುಡಗಿ, ಅಂಬರೇಷ, ಸಂಗು ಕೆ. ಇತರರು ಇದ್ದರು.
ಅಫಜಲಪುರ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಬಸವರಾಜ ರಾಯರಡ್ಡಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಬಿಜೆಪಿ ಯುವ ಘಟಕದ ಅಧ್ಯಕ್ಷ ಅಂಬರೀಷ ಮೇತ್ರಿ ತಹಶೀಲ್ದಾರ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಆಗ್ರಹಿಸಿದರು.
ಪುರಸಭೆ ಸದಸ್ಯರಾದ ಸಿದ್ದರಾಮ ಗಣಾಚಾರಿ, ಹಣಮಂತ ವಡ್ಡರ, ವಿನೋದ ರಾಠೊಡ ಮುಖಂಡರಾದ ಸುನೀಲ ಶೆಟ್ಟಿ, ಅಪ್ಪಾಶಾ ಮುರಳಿ, ಚೆನ್ನಬಸವರಾಜ ಮನ್ನಿ, ಧನರಾಜ ಕೆಂಗನಳ್ಳಿ ಹಾಗೂ ಮತ್ತಿತರರು ಈ ಸಂದರ್ಭದಲ್ಲಿದ್ದರು. ನಂತರ ಪ್ರತಿಭಟನಾಕಾರರು ತಹಶೀಲ್ದಾರ ಶಶಿಕಲಾ ಪಾದಗಟ್ಟಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.