Kalaburagi; ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದ ಕೆಇಎ ಪರೀಕ್ಷಾ ಅಕ್ರಮ ರೂವಾರಿ ಆರ್.ಡಿ.ಪಾಟೀಲ
Team Udayavani, Nov 10, 2023, 5:15 PM IST
ಕಲಬುರಗಿ: ಪ್ರಸಕ್ತ ಸಾಲಿನಲ್ಲಿ ನಡೆದ ಕೆಇಎ ಪರೀಕ್ಷೆಗಲ್ಲೂ ಬ್ಲೂಟೂತ್ ಬಳಕೆ ಮಾಡಿಸಿ ಅಕ್ರಮಕ್ಕೆ ಕಾರಣವಾಗಿದ್ದ ಆರೋಪದ ಅಡಿಯಲ್ಲಿ ಕಣ್ಮರೆಯಾಗಿದ್ದ ಆರ್.ಡಿ.ಪಾಟೀಲ ಅಲಿಯಾಸ್ ರುದ್ರಗೌಡ ಪಾಟೀಲರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯನ್ನಾದರಿಸಿ ಮಹಾರಾಷ್ಟ್ರದ ಸೊಲ್ಲಾಪುರ ಬಳಿ ಪಾಟೀಲನನ್ನು ವಶಕ್ಕೆ ಪಡೆದು ತರಲಾಗುತ್ತಿದೆ ಎಂದು ತಿಳಿದು ಬಂದಿದೆ.
ಎರಡು ದಿನಗಳ ಹಿಂದಷ್ಟೆ ನಗರದ ಅಪಾರ್ಟ್ಮೆಂಟ್ ನಲ್ಲಿ ತಂಗಿದ್ದ ಆತ ಪೊಲೀಸರ ದಾಳಿಯ ಸುಳಿವರಿತು ಅಲ್ಲಿಂದ ಪರಾರಿಯಾಗಿದ್ದ. ಆತನ ಹುಡುಕಾಟಕ್ಕೆ ನಗರ ಕಮಿಷನರೇಟ್ ಮತ್ತು ಎಸ್ಪಿ ಕಲಬುರಗಿ ಮಾರ್ಗದರ್ಶನ ದಲ್ಲಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿತ್ತು.
ಶುಕ್ರವಾರ ಮಹಾರಾಷ್ಟ್ರದಿಂದ ಬಂಧಿಸಿ ಕರೆ ತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಧಿಕೃತವಾಗಿ ಬಂಧನದ ವಿಚಾರ ಪೊಲೀಸರು ಬಹಿರಂಗ ಪಡಿಸಬೇಕಿದೆ.
ಗುರುವಾರವೇ ಬಂಧನ?
ಆರ್.ಡಿ.ಪಾಟೀಲನನ್ನು ಪೊಲೀಸರು ಬುಧವಾರ ಅಥವಾ ಗುರುವಾರ ವಶಕ್ಕೆ ಪಡೆದಿರುವ ಸಾಧ್ಯತೆ ಇದೆ. ಕೆಲವು ಪ್ರಮುಖ ವಿಚಾರಣೆಯ ಬಳಿಕ ಶುಕ್ರವಾರ ಅಧಿಕೃತ ಬಂಧನ ತೋರಿಸುವ ಸಾಧ್ಯತೆ ಇತ್ತು ಎಂದು ಮೂಲಗಳು ತಿಳಿಸಿವೆ.
ಬಂಧನ ಗೊತ್ತಿಲ್ಲ
ಪಾಟೀಲ ಬಂಧನದ ಕುರಿತು ತಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಕಲಬುರಗಿ ಎಸ್ಪಿ ಅಡೂರು ಶ್ರೀನಿವಾಸಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.