ಮಾನವ ಧರ್ಮದ ಮೌಲ್ಯಗಳ ಸಂರಕ್ಷಣೆಯಿಂದ ಸಾಮರಸ್ಯ

Team Udayavani, Mar 12, 2018, 1:14 PM IST

gul-6.jpg

ಜೇವರ್ಗಿ: ಎಲ್ಲ ರಂಗಗಳಲ್ಲಿ ಎಲ್ಲೆಡೆ ಆಂತರಿಕ ಸಂಘರ್ಷಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಮಾನವ ಧರ್ಮದ ಮೌಲ್ಯಗಳ ಸಂರಕ್ಷಣೆ ಮತ್ತು ಪರಿಪಾಲನೆಯಿಂದ ಶಾಂತಿ ಸಾಮರಸ್ಯ ನೆಲೆಗೊಳ್ಳಲು ಸಾಧ್ಯವಾಗುವುದು. ಮನುಷ್ಯ ತನ್ನ ಸ್ವಾರ್ಥ ಸಾಧನೆಗಾಗಿ ಧರ್ಮವನ್ನು ಬಲಿ ಕೊಡಬಾರದು ಎಂದು ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ಮಂದೇವಾಲ ಗ್ರಾಮದ ಶ್ರೀ ಶಂಕರಲಿಂಗೇಶ್ವರ ದೇವಸ್ಥಾನದ ಗೋಪುರ ಕಳಸಾರೋಹಣ ನಿಮಿತ್ತ ಆಯೋಜಿಸಲಾಗಿ ಅಡ್ಡ ಪಲ್ಲಕ್ಕಿ ಹಾಗೂ ಧರ್ಮಸಭೆ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.

ವಿಜ್ಞಾನ ತಂತ್ರಜ್ಞಾನ ಬೆಳವಣಿಗೆಯಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿರುವುದು ಸತ್ಯ. ಆದರೆ ಮನುಷ್ಯನ ಬದುಕು ಒತ್ತಡದಿಂದಾಗಿ ಸುಖ ಶಾಂತಿ ನೆಮ್ಮದಿ ಇಲ್ಲದಂತಾಗಿದೆ. ತಾನು ಎಲ್ಲರಿಗಾಗಿ ಎನ್ನುವ ಮನೋಭಾವ ದೂರವಾಗಿ ಎಲ್ಲರೂ ತನಗಾಗಿ ಅನ್ನುವ ಸ್ವಾರ್ಥ ಬೆಳೆಯುತ್ತಿರುವ ಕಾರಣ ಅಶಾಂತಿ, ಅತೃಪ್ತಿ ಮತ್ತು ಪರಸ್ಪರ ಸಂಘರ್ಷ ಹೆಚ್ಚುತ್ತಿದೆ. ವಿಜ್ಞಾನ ಮತ್ತು ನಾಗರಿಕತೆ ಸಬಲ ಸಂಘರ್ಷದಲ್ಲಿ ಧರ್ಮ ನಾಶವಾಗದಿರಲಿ ಎಂಬ ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ವಾಣಿ ಮರೆಯುವಂತಿಲ್ಲ. ಅಂತೆಯೇ ಶೀಲವಿಲ್ಲದ ಶಿಕ್ಷಣ ಭೀತಿಯಿಲ್ಲದ ಶಾಸನ ಇವು ಪ್ರಜಾತಂತ್ರಕ್ಕೆ ಮಾರಕಗಳು ಎಂಬ ಮಹಾತ್ಮಾ ಗಾಂಧಿಧೀಜಿ ಉಕ್ತಿ ನೆನಪಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ಭಗವತ್ಪಾದರು ಮಾತನಾಡಿ, ಪ್ರತಿಯೊಬ್ಬರೂ ಧರ್ಮ ಮಾರ್ಗದಲ್ಲಿ ಮುನ್ನಡೆಯಬೇಕು. ಸ್ವಧರ್ಮ ಪರಿಪಾಲನೆ ಪರಧರ್ಮ ಸಹಿಷ್ಣುತೆಯಿಂದ ಸಾಮರಸ್ಯ ಬೆಳೆಯಲು ಸಾಧ್ಯವಾಗುತ್ತದೆ. ಐದು ಸಾವಿರ ವರ್ಷಗಳ ಇತಿಹಾಸ ಪರಂಪರೆ ಹೊಂದಿದ ವೀರಶೈವ ಧರ್ಮ ವಿಶ್ವಧರ್ಮವಾಗಿದ್ದು, ವಿಶಾಲ ವ್ಯಾಪ್ತಿ ಹೊಂದಿದೆ.

ವೀರಶೈವ ಪಂಚಪೀಠಗಳು ಅಧರ್ಮದ ವಿರುದ್ಧ ನಿರಂತರ ದಂಡಯಾತ್ರೆ ನಡೆಸುತ್ತಲೇ ಬಂದಿವೆ. ಧರ್ಮ, ದೇವರು, ಜಾತಿ, ಪ್ರಾಂತೀಯ ಮನೋಭಾವನೆಯಿಂದ ಹೊರಬಂದು ಉತ್ಕೃಷ್ಟ ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ಮಾಗಣಗೇರಿ ಹಿರೇಮಠದ ಡಾ| ವಿಶ್ವಾರಾಧ್ಯ ಶಿವಾಚಾರ್ಯರು ಸಮಾರಂಭ ಉದ್ಘಾಟಿಸಿದರು. ಕಡಕೋಳ
ಶ್ರೀ, ಮಳ್ಳಿ ಶ್ರೀ, ನೀಲೂರು ಶ್ರೀ, ಬಸವನಬಾಗೇವಾಡಿ ಶ್ರೀ, ಕುಕನೂರು ಶ್ರೀ ಇದ್ದರು. ನಂತರ ನಾಲ್ವತ್ವಾಡದ ಶ್ರೀ ವೀರೇಶ್ವರ ಪುರಾಣ ಪ್ರವಚನವನ್ನು ಐನಾಪುರದ ಮಲ್ಲಿಕಾರ್ಜುನ ಶಾಸ್ತ್ರಿಗಳು ನಡೆಸಿಕೊಟ್ಟರು.

ಟಾಪ್ ನ್ಯೂಸ್

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Modi-GUJ

Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

Kannada Rajyotsava: ಕರ್ನಾಟಕಕ್ಕೆ ಬಂದಿದ್ದೇ ಒಂದು ಪವಾಡ

Kannada Rajyotsava: ಕರ್ನಾಟಕಕ್ಕೆ ಬಂದಿದ್ದೇ ಒಂದು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Modi-GUJ

Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.