Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
ಈಗ ದೇವಸ್ಥಾನಗಳು ಭಕ್ತರಿಂದ ಭರ್ತಿ... ದೇವರ ಹುಂಡಿಗಳು ತುಂಬುತ್ತಿವೆ
Team Udayavani, Apr 28, 2024, 6:42 PM IST
ವಾಡಿ: ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಲೇ ಬರುತ್ತಿರುವ ಬಿಜೆಪಿ ಆಡಳಿದಲ್ಲೇ “ಧರ್ಮ” ಸಂಕಷ್ಟದಲ್ಲಿತ್ತು. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯಿಂದ ದೇವಸ್ಥಾನಗಳು ಭಕ್ತರಿಂದ ಭರ್ತಿಯಾಗುವ ಜತೆಗೆ ದೇವರ ಹುಂಡಿಗಳು ತುಂಬುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರ್ಗಿ ಲೋಕಸಭೆ ಮತಕ್ಷೇತ್ರ ವ್ಯಾಪ್ತಿಯ ಕೊಲ್ಲೂರು ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿ ಅವರು ಮಾತನಾಡಿದರು. ‘ತಾವೇ ಧರ್ಮ ರಕ್ಷಕರು ಎಂದು ಬೀಗುತ್ತಿರುವ ಬಿಜೆಪಿಗರು, ಧರ್ಮ ರಕ್ಷಣೆಗೆ ಶೂನ್ಯ ಕೊಡುಗೆ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಉಚಿತ ಬಸ್ ಸೌಲಭ್ಯವು ಧರ್ಮಕ್ಷೇತ್ರಗಳ ಚೇತರಿಕೆಗೆ ಕಾರಣವಾಗಿದೆ. ಕೋಟಿ ಸಂಖ್ಯೆಯಲ್ಲಿ ರಾಜ್ಯದ ದೇವಸ್ಥಾನಗಳಿಗೆ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಇದರಿಂದ ಪೂಜಾ ಸಾಮಗ್ರಿಗಳ ವ್ಯಾಪಾರ ಸುಸ್ಥಿತಿಗೆ ಬಂದಿವೆ. ಅರ್ಚಕರ ತಟ್ಟೆಗಳಿಗೂ ಹಣ ಸೇರುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಧರ್ಮ ಕಾಳಜಿ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮೆಹಮೂದ್ ಸಾಹೇಬ, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ, ವೀರಣ್ಣಗೌಡ ಪರಸರೆಡ್ಡಿ, ಮಲ್ಲಿನಾಥಗೌಡ ಸನ್ನತಿ, ಶರಣು ವಾರದ್, ಸಿದ್ದುಗೌಡ ಇಟಗಿ, ಸಿದ್ದುಗೌಡ ಅಫ್ಜಲ್ಪುರ, ಭಾಗಪ್ಪ ಯಾದಗಿರಿ, ಶಿವುರೆಡ್ಡಿಗೌಡ ಈರೆಡ್ಡಿ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.