ಧಾರ್ಮಿಕ ವಸಂತ ಶಿಬಿರ ಆರಂಭ
Team Udayavani, Apr 22, 2017, 3:02 PM IST
ಕಲಬುರಗಿ: ನಗರದ ಬಿದ್ದಾಪುರ ಕಾಲೋನಿಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶುಕ್ರವಾರ ಬೆಳಗ್ಗೆ “ಧಾರ್ಮಿಕ ವಸಂತ ಶಿಬಿರ’ ಆರಂಭಗೊಂಡಿತು. ಶಿಬಿರದ ಸಂಯೋಜಕರಾದ ನವಲಿ ಕೃಷ್ಣಾಚಾರ್ಯ ವಕೀಲರು ಉದ್ಘಾಟಿಸಿದರು.
ಮಂತ್ರಾಲಯದ ಶ್ರೀ ಗುರುಸಾರ್ವಭೌಮ ವಿದ್ಯಾಪೀಠದ ಅಧ್ಯಾಪಕ ಪಂ| ಮಂಚಾಲಿ ಪದ್ಮನಾಭಾಚಾರ್ಯ ಹಾಗೂ ವ್ಯಾಕರಣ ಅಧ್ಯಾಪಕ ಪಂ| ಮಧುಸೂದನಾಚಾರ್ಯ ಹಾಜರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನವಲಿ ಕೃಷ್ಣಾಚಾರ್ಯರು, ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಶ್ರೀಪಾದಂಗಳ ಆಜ್ಞೆಯಂತೆ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಏ. 21ರಿಂದ 30ರ ವರೆಗೆ ನಡೆಯಲಿದೆ ಎಂದರು.
ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಮಂತ್ರಾಲಯದ “ಶ್ರೀ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠ’, ಅಖೀಲ ಭಾರತ ಮಧ್ವ ಮಹಾ ಮಂಡಳ, ಉಡುಪಿಯ ಪೇಜಾವರ ಅಧೋಕ್ಷಜ ಮಠಗಳ ಸಂಯುಕ್ತ ಆಶ್ರಯದಲ್ಲಿ ಶಿಬಿರವು ಬೆಳಗ್ಗೆ 7:30ರಿಂದ 9:00ರ ವರೆಗೆ ಹಾಗೂ ಸಂಜೆ 5:30ರಿಂದ ರಾತ್ರಿ 8:00 ಗಂಟೆ ವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಂತ್ರಾಲಯದ ಪಂ| ಮಂಚಾಲಿ ಪದ್ಮನಾಭಾಚಾರ್ಯ, ಪಂ| ಮಧುಸೂದನಾಚಾರ್ಯರು ಶಿಬಿರ ನಡೆಸಿಕೊಡಲಿದ್ದಾರೆ. ಶ್ರೀ ಮಠದ ಅರ್ಚಕ ಶ್ಯಾಮಾಚಾರ್ಯ ಹಾಗೂ ಇನ್ನಿತರ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.