ನೀರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಮನವಿ
Team Udayavani, Nov 30, 2018, 11:10 AM IST
ಶಹಾಬಾದ: ಬೇಸಿಗೆಯೇ ಪ್ರಾರಂಭವಾಗಿಲ್ಲ. ಈಗಲೇ ಭೀಕರ ಜಲಕ್ಷಾಮ ಆವರಿಸಿ ಕುಡಿಯುವ ಹನಿ ನೀರಿಗಾಗಿ ಗ್ರಾಮಸ್ಥರು
ಪರಿತಪಿಸುತ್ತಿದ್ದಾರೆ. ಆದ್ದರಿಂದ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ತೊನಸನಹಳ್ಳಿ (ಎಸ್) ಗ್ರಾಪಂ ಅಧ್ಯಕ್ಷ ವಿಜಯಕುಮಾರ ಮಾಣಿಕ್ ನೇತೃತ್ವದಲ್ಲಿ ಎಚ್‌ಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ರಾಜಶೇಖರ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ನಾಗೇಂದ್ರ ಹುಗ್ಗಿ, ಸ್ವಾತಂತ್ರ್ಯ ಪೂರ್ವದಿಂದಲೂ ತೊನಸನಹಳ್ಳಿ
(ಎಸ್) ಗ್ರಾಮಕ್ಕೆ ಕುಡಿಯುವ ನೀರಿನ ತೊಂದರೆಯಿದೆ. ಪ್ರತಿವರ್ಷವೂ ಇಲ್ಲಿ ನೀರಿನ ಅಭಾವವೇ ದೊಡ್ಡ ಸಮಸ್ಯೆ. ಶಾಶ್ವತ ಪರಿಹಾರಕ್ಕೆ ಯಾವೊಬ್ಬ ಜನಪ್ರತಿನಿಧಿಯೂ ಗಮನಹರಿಸುತ್ತಿಲ್ಲ. ಗ್ರಾಮದ ಜನರಿಗೆ ನೀರುಣಿಸುತ್ತ ಜೀವನಕ್ಕೆ ಆಧಾರವಾಗಿರುವ ಹಾರಬಾವಿ, ಸೇದೋ ಬಾವಿ, ಇಳೆಬಾವಿ, ಹಣಮಂತ ದೇವರ ಗಿರಕಿ ಬಾವಿ ಹೀಗೆ ಎಲ್ಲ ಬಾವಿಗಳು ಬತ್ತಿ ಹೋಗುತ್ತಿವೆ ಎಂದು ತಿಳಿಸಿದರು.
ಗ್ರಾಮದಲ್ಲಿರುವ ನಾಲ್ಕು ಕೊಳವೆ ಬಾವಿಗಳು ಅಂತರ್ಜಲ ಕುಸಿತದಿಂದ ಉಪಯೋಗಕ್ಕೆ ಬಾರದಂತಾಗಿ ನೀರಿನ ಸಮಸ್ಯೆ ತಲೆದೋರಿದೆ. ಸುಮಾರು 5000 ಸಾವಿರ ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ಜನರು ಮುಖ ತೊಳೆಯಲು ಲೆಕ್ಕ ಹಾಕಬೇಕಾದ ಪರಿಸ್ಥಿತಿ ಮೂಡಿದೆ. ಇನ್ನು ಸ್ನಾನ ಮಾಡುವುದು ದೂರದ ಮಾತು. ದೇವನ ತೆಗನೂರ ಗ್ರಾಮದ ಕೊಳವೆ ಬಾವಿ ಮುಖಾಂತರ ನೀರು ಗ್ರಾಮಕ್ಕೆ ಸರಬಜಾಗುತ್ತಿತ್ತು.
ಅಲ್ಲಿಯೂ ಅಂತರ್ಜಲ ಕುಸಿತದಿಂದ ನೀರಿನ ಸಮಸ್ಯೆ ಕಾಡುತ್ತಿದೆ. ಅಲ್ಲದೇ ವಿದ್ಯುತ್ ಕಣ್ಣಾ ಮುಚ್ಚಾಲೆ ಆಟದಿಂದ ಮತ್ತಷ್ಟು ಸಮಸ್ಯೆಯ ಗಂಭೀರತೆಗೆ ಕಾರಣವಾಗಿದೆ. ಹಲವಾರು ದಶಕಗಳಿಂದ ನೀರಿನ ಸಮಸ್ಯೆಯನ್ನೇ ಹೊತ್ತುಕೊಂಡು ಬದುಕು ಸಾಗಿಸುತ್ತಿರುವ ಗ್ರಾಮದ ಜನರಿಗೆ ಶಾಶ್ವತ ಕುಡಿಯುವ ನೀರಿನ ಸೌಕರ್ಯ ಒದಗಿಸಿಕೊಡಿ ಎಂದರು.
ಎಚ್‌ಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ರಾಜಶೇಖರ ಪಾಟೀಲ ಮನವಿಗೆ ಸ್ಪಂದಿಸಿ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದರು. ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಗೊಳೇದ್, ಗ್ರಾಪಂ ಸದಸ್ಯ ಮಲ್ಲಿಕಾರ್ಜುನ ಬಂಡೇರ್, ಲಕ್ಷ್ಮಣ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.