ಕನ್ನಡ ಭವನ ಬಾಕಿ ಕಾಮಗಾರಿಗೆ ಅನುದಾನ ನೀಡಲು ಮನವಿ
Team Udayavani, Aug 16, 2022, 4:53 PM IST
ಕಲಬುರಗಿ: ನಗರದ ಕನ್ನಡ ಭವನದ ಸುಂದರೀಕರಣಕ್ಕಾಗಿ ಬಾಕಿ ಉಳಿದ ಕಾಮಗಾರಿಗಳನ್ನು ಮುಗಿಸಿಕೊಡಲು ಸೂಕ್ತ ಅನುದಾನ ಕೋರಿ ಜಿಲ್ಲಾ ಉಸ್ತುವಾರಿ ಸಚಿವ ಡಾ| ಮುರುಗೇಶ ನಿರಾಣಿ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಮನವಿ ಸಲ್ಲಿಸಿದರು.
ಕನ್ನಡ ಭವನದಲ್ಲಿನ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಶಾಶ್ವತ ಧ್ವನಿವರ್ಧಕ ಅಳವಡಿಸುವಿಕೆ, ಆಸನಗಳ ವ್ಯವಸ್ಥೆ, ಆವರಣದಲ್ಲಿ ಸುಂದರ ಮತ್ತು ಸ್ವತ್ಛವಾದ ಹಸಿರು ತುಂಬಿ ಉದ್ಯಾನವನವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಅದರ ಬಗ್ಗೆ ಜಿಲ್ಲೆಯ ಶಾಸಕರುಗಳಿಂದಲೂ ಕೂಡ ಅನುದಾನ ಪಡೆಯಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ತೇಗಲತಿಪ್ಪಿ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ| ಮುರುಗೇಶ ನಿರಾಣಿ ಅವರು ಕನ್ನಡ ಭವನದ ಸುಂದರೀಕರಣಕ್ಕಾಗಿ ಬೇಕಾದ ಸವಲತ್ತು ಮಾಡಿಕೊಡುವುದಾಗಿ ಭರವಸೆ ನೀಡಿದರು.
ಎಂಎಲ್ಸಿ ಶಶೀಲ್ ಜಿ.ನಮೋಶಿ, ಶಾಸಕರಾದ ರಾಜಕುಮಾರ ಪಾಟೀಲ ತೆಲ್ಕೂರ, ಸುಭಾಷ್ ಆರ್.ಗುತ್ತೇದಾರ, ಜಿಲ್ಲಾಧಿಕಾರಿ ಯಶ್ವಂತ ಗುರುಕರ್, ಪ್ರಮುಖರಾದ ರಾಘವೇಂದ್ರ ಕುಲಕರ್ಣಿ, ಲಕ್ಷ್ಮಣ ದಸ್ತಿ, ಶಾಮರಾವ ಪ್ಯಾಟಿ, ಸಿದ್ರಾಮಪ್ಪಾ ಪಾಟೀಲ ಧಂಗಾಪುರ ಸೇರಿದಂತೆ ಅನೇಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.