ಶೈಕ್ಷಣಿಕ ಸಾಲಮನ್ನಾಕ್ಕಾಗಿ ದೆಹಲಿಧರಣಿಯಲ್ಲಿ ಭಾಗವಹಿಸಲು ಮನವಿ
Team Udayavani, Dec 11, 2018, 10:48 AM IST
ಕಲಬುರಗಿ: ಶೈಕ್ಷಣಿಕ ಸಾಲ ಪಡೆದ ವಿದ್ಯಾರ್ಥಿಗಳ ಬಡ್ಡಿ ಹಣ ಬಿಡುಗಡೆ ಮಾಡಬೇಕು ಹಾಗೂ ಹೈ.ಕ.ವ್ಯಾಪ್ತಿಯಲ್ಲಿನ ಜಿಲ್ಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು 371 (ಜೆ) ಅಡಿ ಸಂಪೂರ್ಣ ಸಾಲ ಮನ್ನಾ ಮಾಡಲು ಒತ್ತಾಯಿಸಿ ಈಶಾನ್ಯ ವಲಯದ ಶಿಕ್ಷಕರ ವೇದಿಕೆ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಭಾಗವಹಿಸುವಂತೆ ಪಾಲಕರಲ್ಲಿ ವೇದಿಕೆ ಅಧ್ಯಕ್ಷ ಎಂ.ಬಿ.ಅಂಬಲಗಿ ಮನವಿ ಮಾಡಿದರು.
ನಗರದಲ್ಲಿ ನಡೆದ ಶೈಕ್ಷಣಿಕ ಸಾಲ ಪಡೆದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು. ವಾರ್ಷಿಕ ಆದಾಯ 4.5 ಲಕ್ಷಕ್ಕಿಂತ ಕಡಿಮೆಯಿರುವ ಉನ್ನತ ವ್ಯಾಸಂಗಕ್ಕಾಗಿ ಪಡೆದ ಶೈಕ್ಷಣಿಕ ಸಾಲಕ್ಕಾದ ಬಡ್ಡಿ ಕೇಂದ್ರ ಸರಕಾರ 2009 ಮತ್ತು 2014ರಲ್ಲಿ ತುಂಬುವುದಾಗಿ ಆದೇಶ ನೀಡಿ ಹಣ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಮತ್ತು ಹೈದ್ರಾಬಾದ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಪಡೆದ ಶೈಕ್ಷಣಿಕ ಸಾಲವನ್ನು 371 (ಜೆ) ಅಡಿ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ವೇದಿಕೆ ನೇತೃತ್ವದಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಶೈಕ್ಷಣಿಕ ಸಾಲ ಪಡೆದ ವಿದ್ಯಾರ್ಥಿಗಳ ಪಾಲಕರು ಡಿ. 12 ಮತ್ತು 13ರಂದು ದೆಹಲಿ ಜಂತರ-ಮಂತರನಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಭಾಗವಹಿಸಿ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಬೇಕು ಎಂದು ಪಾಲಕರಲ್ಲಿ ಅವರು ಮನವಿ ಮಾಡಿದರು.
ಡಿ. 10 ಮತ್ತು 11ರಂದು ಬೀದರ, ಕಲಬುರಗಿ, ಹೈದ್ರಾಬಾದ, ಮುಂತಾದ ಸ್ಥಳಗಳಿಂದ ರೈಲ್ವೆ ಮೂಲಕ ದೆಹಲಿಗೆ ಹೋಗಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಎಲ್ಲ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಜಂತರ-ಮಂತರನಲ್ಲಿ ನಡೆಯುವ ಹೋರಾಟಕ್ಕೆ ಬೆಂಬಲಿಸಿ ಕೇಂದ್ರ ಸರಕಾರ ಶೈಕ್ಷಣಿಕ ಸಾಲಮನ್ನಾ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹಾಕುವಂತೆ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರಲ್ಲಿ ವೇದಿಕೆ ಮನವಿ ಮಾಡುತ್ತದೆ ಎಂದು ಹೇಳಿದರು.
ಸೂರ್ಯಕಾಂತ ಜೀವಣಗಿ, ಬಸವರಾಜ ರಾಜಾಪುರ, ಕೃಷ್ಣ ಭಟ್ ಜೋಶಿ, ಜಗನ್ನಾಥರೆಡ್ಡಿ ಯಾದಗಿರಿ, ರವಿ ಶಾಸ್ತ್ರೀ, ಪ್ರಭು ಪಾಟಿಲ. ಮೊಹಮ್ಮದ್ ಜಾಫರ್, ಆರ್. ಎಸ್. ಪಾಟಿಲ, ದಿಲೀಪ ಸೇರಿದಂತೆ ನೂರಾರು ಪಾಲಕರು ಉಪಸ್ತಿತರಿದ್ದರು. ದೆಹಲಿಗೆ ಬರಬಯಸುವ ಪಾಲಕರು
9880169907ಗೆ ಸಂಪರ್ಕಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.