ಶುದ್ಧ ನೀರು ಪೂರೈಸಲು ಆಗ್ರಹಿಸಿ ಮನವಿ
Team Udayavani, Jul 27, 2020, 12:16 PM IST
ಶಹಾಬಾದ: ನಗರದ ಜಿಇ ಕಾಲೋನಿಯ ಜನರಿಗೆ ಶುದ್ಧ ನೀರು ಪೂರೈಸಬೇಕು. ಕಾಲೋನಿಯ ಸ್ವಚ್ಛತೆ ಕಾಪಾಡಬೇಕೆಂದು ಆಗ್ರಹಿಸಿ ಅಲಸ್ಟಾಂ ನಿವೃತ್ತ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಸುರೇಶ ವರ್ಮಾ ಅವರಿಗೆ ಮನವಿ ಸಲ್ಲಿಸಿದರು.
ಅಲಸ್ಟಾಂ ನಿವೃತ್ತ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಗಾಯಕವಾಡ ಮಾತನಾಡಿ, ನಿವೃತ್ತ ನೌಕರರು ವಾಸಿಸುವ ಜಿಇ ಕಾಲೋನಿಯಲ್ಲಿ ಸುಮಾರು ಮೂರು ವರ್ಷದಿಂದ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಇದರಿಂದ ಇಲ್ಲಿನ ಜನರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ತಿಳಿಸಿದರೂ ಸಂಬಂಧಿಸಿದ ಜಿಇ ಕಾಲೋನಿಯ ಅಧಿಕಾರಿ ವರ್ಗದವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅಲ್ಲದೇ ಕಾಲೋನಿಯಲ್ಲಿ ನಗರೋತ್ಥಾನದಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡಿ ಒಳಚರಂಡಿ ವ್ಯವಸ್ಥೆ ಮಾಡಿದ್ದಾರೆ. ಅದನ್ನು ಇನ್ನೂ ಸಂಪರ್ಕಿಸುವ ಕೆಲಸ ಮಾಡದಿರುವುದರಿಂದ ಹಳೆ ಒಳ ಚರಂಡಿಗಳು ಹಾಳಾಗಿ ನೀರು ಹೊರಬಂದು ಗಬ್ಬು ವಾಸನೆ ಹರಡುತ್ತಿದೆ. ಎಲ್ಲಿ ನೋಡಿದರಲ್ಲಿ ಕಸ, ಹುಲ್ಲು, ಗಿಡಕಂಟಿ ಬೆಳೆದು ವಾಸಿಸಲು ಅಯೋಗ್ಯ ಸ್ಥಾನವಾಗಿದೆ. ಇದನ್ನು ಸ್ವಚ್ಛತೆ ಮಾಡಲು ಅನೇಕ ಬಾರಿ ಅಧಿಸೂಚಿತ ಕ್ಷೇತ್ರ ಸಮಿತಿಯ ಅಧಿ ಕಾರಿಗೆ ತಿಳಿಸಿದರೂ ಕ್ಯಾರೇ ಎನ್ನುತ್ತಿಲ್ಲ. ಕೂಡಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನಗರೋತ್ಥಾನದಲ್ಲಿ ನಿರ್ಮಿಸಿದ ಒಳಚರಂಡಿ ವ್ಯವಸ್ಥೆಯನ್ನು ಹಳೆ ಚರಂಡಿಗೆ ಸಂಪರ್ಕಿಸಬೇಕು. ಕಾಲೋನಿಯ ಸ್ವತ್ಛತೆ ಕಾಪಾಡಬೇಕು. ಇಲ್ಲದಿದ್ದರೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪೌರಾಯುಕ್ತ ಕೆ. ಗುರಲಿಂಗಪ್ಪ, ನಿವೃತ್ತ ನೌಕರರ ಸಂಘದ ಶಿವಶರಣಪ್ಪ ಜೆಟ್ಟೂರ್, ನಾಗರಾಜ ಸಿಂಘೆ, ದಸಂಸ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಕರಣಿಕ್, ಭೀಮಾಶಂಕರ ದಂಡೋತಿ, ಅನಿಲ, ಲೇಖು, ಜಾವೀದ್, ವಿಲಿಯಮ್ಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.