ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವಿದ್ಯಾರ್ಥಿಗಳ ರಕ್ಷಿಸಿದ
Team Udayavani, Sep 10, 2017, 11:38 AM IST
ಆಳಂದ: ಉಕ್ಕಿ ಹರಿದ ಕಣ್ಮಸ್ ಗ್ರಾಮದ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಗ್ರಾಮಸ್ಥರ ಸಹಾಯದಿಂದ ಪಾರಾದ ಘಟನೆ ಶುಕ್ರವಾರ ಸಂಜೆ ತಾಲೂಕಿನ ವಳವಂಡವಾಡಿ ಗ್ರಾಮದಲ್ಲಿ ನಡೆದಿದೆ.
8ನೇ ತರಗತಿ ವಿದ್ಯಾರ್ಥಿ ಚನ್ನವೀರ ಚಿಂಚೋಳಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಹೇಶ ಅಟ್ಟೂರೆ ಎಂಬುವರು ಕಣ್ಮಸ್ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದರು.
ಇದನ್ನು ಗಮನಿಸಿದ ಗ್ರಾಮಸ್ಥರು ಇವರನ್ನು ರಕ್ಷಿಸಿದರು. ಶುಕ್ರವಾರ ಮಧ್ಯಾಹ್ನ 4:30ರ ಸುಮಾರಿಗೆ ವಳವಂಡವಾಡಿ ಗ್ರಾಮದ ಸೇತುವೆ ಉಕ್ಕಿ ಹರಿದ ಪರಿಣಾಮ ರಾತ್ರಿ 9:00 ಗಂಟೆಯವರೆಗೆ ವಿದ್ಯಾರ್ಥಿಗಳು ರಸ್ತೆಯ ಮೇಲೆಯೇ ಕಾಯ್ದು
ನಿಲ್ಲುವಂತಾಗಿತ್ತು. ರಾತ್ರಿ 9:00 ಗಂಟೆ ಸುಮಾರಿಗೆ ನೀರಿನ ಹರಿವು ಕುಗ್ಗಿದ ಮೇಲೆ ಮನೆ ಸೇರಿದೆವು ಎಂದು ವಿದ್ಯಾರ್ಥಿಗಳು ತಿಳಿಸಿದರು.
ಸಂಚಾರಕ್ಕೆ ತೊಂದರೆ: ಆಗಾಗ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ನಿಂಬರಗಾ ಆಳಂದ ರಸ್ತೆ, ನಿರುಗಡಿ ಮತ್ತು ಆಳಂದ ರಸ್ತೆ, ವಳವಂಡವಾಡಿ-ತಡಕಲ್ ರಸ್ತೆ, ತೀರ್ಥ ಸಾಲೇಗಾಂವ ರಸ್ತೆ ಗುಂಡಿಗಳಲ್ಲಿ ನೀರು ನಿಂತು
ಸಂಚಾರಕ್ಕೆ ಪರದಾಡುವಂತೆ ಆಗಿದೆ. ರಸ್ತೆಗಳು ಹದಗೆಟ್ಟಿವೆ. ರಸ್ತೆ ನಿರ್ಮಾಣವಾಗದೆ ಇರುವುದರಿಂದ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಸ್ಥಗಿತಗೊಂಡಿದೆ. ಶಾಲೆ-ಕಾಲೇಜಿನ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಪ್ರಯಾಣಕ್ಕೆ ತೊಂದರೆಯಾಗಿ ಪರದಾಡುವಂತೆ ಆಗಿದೆ ಎಂದು ಗ್ರಾಮದ ಭಾಗ್ಯವಂತ ಪೂಜಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.