ಕನಿಷ್ಠ ವೇತನಕ್ಕೆ ಹೊರಗುತ್ತಿಗೆ ವಸತಿ ಶಾಲೆ ನೌಕರರ ಆಗ್ರಹ


Team Udayavani, Aug 31, 2017, 10:48 AM IST

gul-4.jpg

ಕಲಬುರಗಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿ.ಪಂ. ಸಿಇಒ ಕಚೇರಿ ಎದುರು
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು.

ಹೊರಗುತ್ತಿಗೆ ನೌಕರರಿಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ತೊಂದರೆ ಕೊಡುವುದನ್ನು ಮುಂದುವರಿಸಿದ್ದಾರೆ. ಈ ಹಿಂದೆ ನೇರ ನೇಮಕಾತಿ ಆದೇಶ ಹೊರಡಿಸಿ ಎಸ್ಸೆಸ್ಸೆಲ್ಸಿ ಕಡ್ಡಾಯಗೊಳಿಸಿ, ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಲು ಮುಂದಾದಾಗ ಹೋರಾಟ ಮಾಡಿದ್ದರ ಫಲವಾಗಿ ಆದೇಶ ಹಿಂದಕ್ಕೆ ಪಡೆಯಲಾಗಿದೆ. ಈಗ
ವಿನಾಕಾರಣ ನೌಕರರನ್ನು ಕೆಲಸದಿಂದ ವಜಾಮಾಡಲಾಗುತ್ತಿದೆ ಎಂದರು. ಏ.1 ರಿಂದ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಎಲ್ಲೂ ಜಾರಿಯಾಗಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಸುಪ್ರಿಂಕೋರ್ಟ್‌ ಆದೇಶವಿದ್ದರೂ ಅದನ್ನು ಗಾಳಿಗೆ ತೂರಲಾಗಿದೆ. ಬಡ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡದ ಸರ್ಕಾರ ಕೂಡಲೇ ಕಾರ್ಮಿಕ ವಿರೋಧಿ ನೀತಿ ಕೈಬಿಡಬೇಕೆಂದು ಒತ್ತಾಯಿಸಿದರು.

ವಸತಿ ಶಾಲೆಗಳಲ್ಲಿ ಅನೇಕ ವರ್ಷದಿಂದ ದುಡಿಯುತ್ತಿರುವಹೊರಗುತ್ತಿಗೆ ಕಾರ್ಮಿಕರನ್ನು ಯಾವುದೇ ಕಾರಣಕ್ಕೆ
ವಜಾಗೊಳಿಸಬಾರದು. ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯಲ್ಲಿ 10 ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ
ಇಲಾಖೆಯಲ್ಲಿ ಏಳು ಜನರನ್ನು ಕೆಲಸದಿಂದ ತೆಗೆದಿದ್ದು, ಅವರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಹೊರಗುತ್ತಿಗೆ ನೌಕರರ ಕಳೆದ ಐದಾರು ತಿಂಗಳ ವೇತನ ಬಾಕಿ ಇರಿಸಿಕೊಂಡಿದ್ದು, ಕೂಡಲೇ ಪಾವತಿಸಬೇಕು.
ಆಳಂದ, ಕೋಡ್ಲಾ, ಗುಂಡಗುರ್ತಿಯಲ್ಲಿನ ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ ನೌಕರರಿಗೆ ಮಾನಸಿಕ ಹಿಂಸೆ
ನೀಡಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪವರ್‌ ಏಜೆನ್ಸಿಗಳಿಂದ ಪ್ರತಿವರ್ಷ ನೌಕರರಿಗೆ ಸೇವೆ ತಾತ್ಕಾಲಿಕ ಆದೇಶ ಪತ್ರ ನೀಡಬೇಕೆಂದು ಒತ್ತಾಯಿಸಿದ ಅವರು 2017-18 ರಲ್ಲಿ ತಾತ್ಕಾಲಿಕ ಆದೇಶ ಪತ್ರ ಯಾರಿಗೂ ನೀಡಿಲ್ಲ. ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ಜಾರಿ ಮಾಡದೇ ಹೊರಗುತ್ತಿಗೆ ನೌಕರರಿಗೆ ನೇಮಕಾತಿ ಆದೇಶ ನೀಡದೇ ಹಳೆ ವೇತನ ದರದಲ್ಲಿ ವೇತನ ಪಾವತಿಸಿ ವಂಚಿಸಲಾಗುತ್ತಿದೆ. ಆದ್ದರಿಂದ ಸೂಕ್ತ ನ್ಯಾಯ ಒದಗಿಸಬೇಕು ಎಂದರು.

ಧರಣಿಯಲ್ಲಿ ಜಿಲ್ಲಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಮೇಘರಾಜ ಕಠಾರೆ, ಮೋಹನ ಕಟ್ಟಿಮನಿ, ಸುಭಾಷ
ಬೆಡಸೂರ, ಅಶೋಕ ಹುಳಗೇರಾ, ಜಯಶ್ರೀ ಕಟ್ಟಿಮನಿ, ಫಾತೀಮಾ ಬೇಗಂ ಪತ್ತೆಪಹಾಡ, ಭಾಗಿರಥಿ ಕೋಡ್ಲಿ,
ಪರಶುರಾಮ ಹಡಲಗಿ,ಶಾಂತಕುಮಾರ ಮುನ್ನಳ್ಳಿ, ಭಾಗಣ್ಣ ದೇವನೂರ,ಮಹಾದೇವಿ ಗೌಡಕಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.