ತಾಪಂ ಎದುರು ನಿವೃತ್ತ ಗ್ರಾಪಂ ಸಿಬ್ಬಂದಿ ಸತ್ಯಾಗ್ರಹ
Team Udayavani, May 28, 2022, 11:17 AM IST
ಅಫಜಲಪುರ: ತಾಲೂಕಿನ ವಿವಿಧ ಗ್ರಾಪಂಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ನಿವೃತ್ತಿಯಾದರೂ ವೇತನ ಪಾವತಿ ಮಾಡಿಲ್ಲವೆಂದು ತಾಪಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ನಿವೃತ್ತ ನೌಕರರು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಹಕಾರದೊಂದಿಗೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಸತ್ಯಾಗ್ರಹ ಉದ್ದೇಶಿಸಿ ಕಾರ್ಮಿಕ ಮುಖಂಡ ಶ್ರೀಮಂತ ಬಿರಾದಾರ ಮಾತನಾಡಿ, ಗ್ರಾ.ಪಂ ನೌಕರರು ಕರ್ತವ್ಯದಲ್ಲಿದ್ದಾಗ ಕೆಲಸ ಮಾಡಿಸಿಕೊಂಡು ಈಗ ಅವರಿಗೆ ವೇತನ ನೀಡದೇ ಸತಾಯಿಸುತ್ತಿದ್ದಾರೆ. ವೇತನ ನಂಬಿ ಅವರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಆದ್ದರಿಂದ ಕೂಡಲೇ ಸಂಬಂಧಪಟ್ಟವರು ನಿವೃತ್ತ ನೌಕರರ ವೇತನ ಪಾವತಿಸಬೇಕು. ವೇತನ ಪಾವತಿ ಮಾಡುವ ತನಕ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.
ತಾಪಂ ಮ್ಯಾನೇಜರ್ ಪ್ರಶಾಂತ ಅಂಗಡಿ, ಪಿಡಿಒ ಶಂಕರ ದ್ಯಾಮಣ್ಣವರ್ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ನಿವೃತ್ತ ನೌಕರರ ವೇತನ ಬಾಕಿ ಉಳಿದಿರುವ ಬಗ್ಗೆ ಮತ್ತು ಪಾವತಿಯಾಗದಿರುವ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದರು.
ವಕೀಲ ಮಚೇಂದ್ರ ಜಾಬಾದಿ, ನಿವೃತ್ತ ನೌಕರರಾದ ಶಿವಶರಣ ಹಣಮಂತ ಅಗಸಿ, ಕೊಂಡಿಬಾ ಪವಾರ, ಗಡ್ಡೆಪ್ಪ ನಾಗರಳ್ಳಿ, ಜೆಟ್ಟೆಪ್ಪ ತಳವಾರ, ಭಾಗಣ್ಣ ಜೆಟ್ಟೆಪ್ಪ, ಸಾಹೇಬ್‌ಲಾಲ್ ಮಹಿಬೂಬ್ ಸಾಬ್, ಭೀಮಾಶಂಕರ ಕೋಲಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.