ಪದವಿ ಪೂರ್ವ ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ
Team Udayavani, Oct 30, 2017, 12:30 PM IST
ಔರಾದ: ಪ್ರತಿಯೊಂದು ವಿಷಯ ಕುರಿತು ಆಳ ಅಧ್ಯಯನ ಮಾಡಿ ಅದನ್ನು ಇನ್ನಿತರರಿಗೆ ತಿಳಿಸುವ ಮೂಲಕ ಪುನಶ್ಚೇತನಕ್ಕೆ ನಾವು ಮುಂದಾಗಬೇಕಾಗಿದೆ ಎಂದು ಸಮಾಜ ಸೇವಕ ಶಿವಕುಮಾರ ತರನ್ನಳ್ಳಿ ಹೇಳಿದರು. ಸಂತಪುರ ಸಿದ್ದರಾಮೇಶ್ವರ ಪದವಿಪೂರ್ವ ಮಹಾ ವಿದ್ಯಾಲಯದಲ್ಲಿ ನಡೆದ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತಾಡಿದರು. ಆಧುನಿಕ ಯುಗದಲ್ಲಿ ನಾವು ಪ್ರತಿಯೊಂದು ವಿಷಯದ ಬಗ್ಗೆ ನಿತ್ಯ ನಿರಂತರ ಅಧ್ಯಯನ ಮಾಡುತ್ತೇವೆ.
ಅಧ್ಯಯನ ಮಾಡಿದ ವಿಷಯ ಕುರಿತು ಯುವಕರಿಗೆ, ವಿದ್ಯಾರ್ಥಿಗಳಿಗೆ ತಿಳಿಸಿ ಪುನಶ್ಚೇತನ ಮಾಡಲು ಮುಂದಾಗಬೇಕು. ಅಂದಾಗ ಮಾತ್ರ ಅಧ್ಯಯನ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದರು. ವಿದ್ಯಾರ್ಥಿಗಳು ಹಾಗೂ ಯುವಕರು ತಾವು ವಿದ್ಯಾವಂತರು ಎನ್ನುವ ದರ್ಪ ತೋರಿಸದೇ ಗುರು-ಹಿರಿಯರು ಪಾಲಕರು ಮತ್ತು ಶಿಕ್ಷಕರಿಗೆ ಗೌರವ ನೀಡುವ ಸಂಪ್ರದಾಯ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಸಂಜುಕುಮಾರ ಜುಮ್ಮಾ ಮಾತನಾಡಿ, ಭೂಮಿಯಲ್ಲಿ ಜನ್ಮ ತಾಳಿದ ಪ್ರತಿಯೊಬ್ಬರು ತಮ್ಮ ಕರ್ತವ್ಯಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಬೀರಪ್ಪ ಕಡ್ಲಿಮಟ್ಟಿ ಮಾತನಾಡಿ, ಪ್ರತಿಯೊಬ್ಬರು ತಮ್ಮಲ್ಲಿ ಅದ್ಭುತವಾದ ಶಕ್ತಿ, ಸೃಜನಶೀಲತೆ ಇದೆ ಎಂದು ನಂಬಿ ಜೀವನ ಸಾಗಿಸಬೇಕು ಎಂದು ಹೇಳಿದರು.
ಪ್ರಾಚಾರ್ಯ ನವೀಲಕುಮಾರ ಮಾತನಾಡಿ, ಶಾಲೆ ಹಾಗೂ ಕಾಲೇಜಿನಲ್ಲಿ ಬೋಧನೆ ಮಾಡಿದ ವಿಷಯವನ್ನು ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿ ಜೀವನವನ್ನು ಸುಂದರವಾಗಿ ನಿರ್ಮಿಸಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು. ಗಣಪತಿ, ವಿಜಯಕುಮಾರ ಪಾಟೀಲ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.