ಬೆಳೆ ಪರಿಹಾರಕ್ಕಾಗಿ ಒತ್ತಾಯಿಸಿ ರಸ್ತೆ ತಡೆ
Team Udayavani, Oct 15, 2019, 10:22 AM IST
ಅಫಜಲಪುರ: ಅತಿ ವೃಷ್ಟಿಯಿಂದಾಗಿ ಲಕ್ಷಾಂತರ ಎಕರೆ ಬೆಳೆ ಹಾನಿಯಾಗಿದೆ. ನೂರಾರು ಸಾವು ನೋವುಗಳಾಗಿವೆ. ಮನೆ, ಆಸ್ತಿ ಕಳೆದುಕೊಂಡು ಜನ ಬೀದಿ ಪಾಲಾಗಿದ್ದಾರೆ. ಸರ್ಕಾರ ಆದಷ್ಟು ಬೇಗ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ತುಂಬಿ ಹರಿಯುತ್ತಿರುವ ಭೀಮಾ ನದಿಯಿಂದ ತಾಲೂಕಿನ ಕೆರೆ ತುಂಬಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕು ಘಟಕದಿಂದ ರಸ್ತೆ ತಡೆ ನಡೆಸಲಾಯಿತು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಮಾತನಾಡಿದ ಜೆಡಿಎಸ್ ತಾಲೂಕು ಅಧ್ಯಕ್ಷ ರಾಜು ಬಡದಾಳ, ಭೀಮಾ ನದಿ ತುಂಬಿದೆ. ಆದರೆ ಅದು ಉಪಯೋಗಕ್ಕೆ ಬಾರದಂತಾಗಿದೆ. ಇನ್ನೊಂದು ಕಡೆ ಸಮರ್ಪಕ ಮಳೆಯಾಗದೆ ಕೆರೆ ಕುಂಟೆಗಳೆಲ್ಲ ಖಾಲಿಯಾಗಿವೆ. ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಭೀಮಾ ನದಿ ನೀರನ್ನು ತಾಲೂಕಿನ ಕೆರೆಗಳಿಗೆ ತುಂಬಿಸುವ ಕೆಲಸ ಮಾಡಬೇಕು. ಅಲ್ಲದೆ ನದಿ ಪ್ರವಾಹದಿಂದ ಬೆಳೆ ಹಾಳಾಗಿದ್ದರಿಂದ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ತಹಶೀಲ್ದಾರ್ ಮಧುರಾಜ್ ಕೂಡಲಗಿ ಅವರಿಗೆ ಮನವಿ ಸಲ್ಲಿಸಲಾಯಿತು. ಸುನೀಲ ಹೊಸ್ಮನಿ, ಹಣಮಂತ ಬಿರಾದಾರ, ಸಂಜು ಕೋಳಿಗೇರಿ, ಗುಂಡುರಾವ್ ಬಂದರವಾಡ, ಅಸ್ಲಂ ನಗರಚಿ, ರಾಜು ಬಂದರವಾಡ, ಶರಣು ಸೂಲೇಕರ, ವಾಸುದೇವ ದೊಡ್ಮನಿ, ಶಿವು ಮಲ್ಲಾಬಾದ, ಪ್ರಕಾಶ ಕಲ್ಯಾಣಿ, ಕುಮಾರಸ್ವಾಮಿಮಠ, ಹರಿಸಿಂಗ ರಾಠೊಡ, ರಮೇಶ ರಾಠೊಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.