1200 ಕೋಟಿ ಅನುದಾನ ಸಿಎಂ ಕೊಡುಗೆ


Team Udayavani, Aug 14, 2017, 10:26 AM IST

170813kpn71 copy.jpg

ಆಳಂದ: ಕುಡಿಯುವ ನೀರು, ರಸ್ತೆ, ಅಂತರ್ಜಲ ಹೆಚ್ಚಳ ಕಾಮಗಾರಿ ಸೇರಿದಂತೆ ಇನ್ನಿತರ ಹಲವು ಅಭಿವೃದ್ಧಿ ಕೆಲಸ-ಕಾರ್ಯಗಳಿಗೆ ಇದುವರೆಗೂ 1200 ಕೋಟಿ ರೂ. ಗಿಂತ ಹೆಚ್ಚಿನ ಅನುದಾನ ಕ್ಷೇತ್ರಕ್ಕೆ ಹರಿದು ಬಂದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ಎಂದು ಶಾಸಕ ಬಿ.ಆರ್‌. ಪಾಟೀಲ ಹೇಳಿದರು. 

ಪಟ್ಟಣದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಮಿನಿ ವಿಧಾನಸೌಧ ನಿರ್ಮಾಣ ಮತ್ತು ವಿವಿಧ ಕಾಮಗಾರಿಗಳ ಅಡಿಗಲ್ಲು, ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳು ಮಾತುಕೊಟ್ಟಂತೆ ನಡೆದುಕೊಂಡಿದ್ದಾರೆ. ರಾಜ್ಯದಲ್ಲಿ ರೈತಪರ, ಜನಪರ ಆಡಳಿತ ನೀಡಿದ್ದಾರೆ ಎಂದರು. ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಜಿಲ್ಲೆಯಲ್ಲಿ ಐತಿಹಾಸಿಕ ಕಾರ್ಯಗಳನ್ನು ಮಾಡಿದ್ದಾರೆ. ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. 

ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ 371ನೇ ಕಲಂ ಜಾರಿಗೆ ತಂದ ಖರ್ಗೆ, ಧರ್ಮಸಿಂಗ್‌, ವೈಜನಾಥ ಪಾಟೀಲ ಅವರ ಪರಿಶ್ರಮವನ್ನು ಜನ ಮರೆಯುವುದಿಲ್ಲ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣ ಪ್ರಕಾಶ ಪಾಟೀಲ ಮಾತನಾಡಿ, ಶಾಸಕ ಬಿ.ಆರ್‌. ಪಾಟೀಲ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ಜನಪರ ಕಾಳಜಿ ವಹಿಸಿದ್ದಾರೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ, ಶಾಸಕ ಜಿ. ರಾಮಕೃಷ್ಣ, ಔಸಾ ಶಾಸಕ ಬಸವರಾಜ ಪಾಟೀಲ ಮುರುಮ, ಅಕ್ಕಲಕೋಟ ಶಾಸಕ ಸಿದ್ರಾಮ ಮೇತ್ರೆ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷ ಇಲ್ಲಿಯಾಸ್‌ ಭಾಗವಾನ್‌, ಮಾಜಿ ಶಾಸಕ ಅಲ್ಲಂಪ್ರಭು ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷ ವಿಠಲರಾವ್‌ ಪಾಟೀಲ, ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ, ಜಿಪಂ ಸದಸ್ಯ ಸಿದ್ದರಾಮ ಪ್ಯಾಟಿ, ಮಲ್ಲೇಶಪ್ಪ ಬಿರಾದಾರ ಪಾಲ್ಗೊಂಡಿದ್ದರು.

ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಮಳೆ ಅಭಾವದಿಂದಾಗಿ ಅಲ್ಪಾವಧಿ  ಬೆಳೆ ಎಳ್ಳು, ಹೆಸರು, ಉದ್ದು ಬೆಳೆಗಳ ಹಾನಿಯಾಗಿವೆ. ಆದ್ದರಿಂದ ಪರಿಹಾರ ನೀಡಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ ಒತ್ತಾಯಿಸಿದರು. ಪಟ್ಟಣದ ಹೊರವಲಯದಲಿ ರವಿವಾರ ಉದ್ದೇಶಿತ ಮಿನಿ ವಿಧಾನಸೌಧ ಅಡ್ಡಿಗಲ್ಲು ನೆರವೇರಿಸಿದ್ದ ಸ್ಥಳದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಬೆಳೆ ಹಾನಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಮಳೆ ಬಾರದೆ ದಿನದೊಡುತ್ತಿರುವುದರಿಂದ ಇನ್ನುಳಿದ ತೊಗರಿ ಬೆಳೆ ಜಿಲ್ಲೆಯಲ್ಲಿ 3.50ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿ ಮಳೆಯಿಲ್ಲದೆ ಬೆಳೆ ಬೆಳವಣಿಗೆ ಕುಂಠಿತವಾಗತೊಡಗಿದೆ. ಮಳೆ ಒಂದು ವಾರದ ಮುಂದೂಡಿದರೆ ಬೆಳೆ ಕುಂಠಿತವಾಗಲಿದೆ. ಕೂಡಲೇ ಪರಿಹಾರ ಘೋಷಿಸಿ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.