ಸ್ಯಾಂಟ್ರೋ ರವಿ ಹಣ ಲೆಕ್ಕ ಮಾಡಿದ್ದು ಆರಗ ಮನೆಯಲ್ಲೇ: ಎಚ್. ಡಿ. ಕುಮಾರಸ್ವಾಮಿ
ಸೋಮಶೇಖರ್-ಸ್ಯಾಂಟ್ರೋ ರವಿ ನಡುವಿನ ಚರ್ಚೆ ವೀಡಿಯೋ ಮಾಡಿದ್ದು ನಾನಲ್ಲ
Team Udayavani, Jan 10, 2023, 7:33 AM IST
ಆಳಂದ: ಸ್ಯಾಂಟ್ರೋ ರವಿ ಜತೆಗೆ ಸಚಿವರು, ಬಿಜೆಪಿ ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆಕಂತೆ ನೋಟುಗಳ ಜತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣ ಲೆಕ್ಕ ಮಾಡುತ್ತಿರುವ ಫೋಟೋ ವೈರಲ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಖಜೂರಿಯಲ್ಲಿ ಸೋಮವಾರ ಜರಗಿದ ಜೆಡಿಎಸ್ ಪಂಚರತ್ನ ರಥಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸೋಮಶೇಖರ್ ಜತೆ ಸ್ಯಾಂಟ್ರೋ ರವಿ ವರ್ಗಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಆ ವೀಡಿಯೋ ರೆಕಾರ್ಡ್ ನಾನು ಮಾಡಿಸಿದ್ದಲ್ಲ. ಇಂತಹ ವಿಷಯ ಇಟ್ಟುಕೊಂಡು ರಾಜಕೀಯ ಮಾಡುವ ಕರ್ಮ ನನಗಿಲ್ಲ. ದಲ್ಲಾಳಿಗಳೇ ಆಡಳಿತ ನಡೆಸುವ ಸ್ಥಿತಿಯನ್ನು ಬೊಮ್ಮಾಯಿ ಸೃಷ್ಟಿ ಮಾಡಿ ಕೊಂಡಿದ್ದಾರೆ ಎಂದರು.
ನಿಮ್ಮ ತಂದೆ ಹೇಳಿಕೊಟ್ಟಿದ್ದು ಇದೇನಾ ಬೊಮ್ಮಾಯಿ ಅವರೇ? ಸಿಎಂ ಮನೆ ಕೂಗಳತೆ ದೂರ ದಲ್ಲಿ ಇದೆಲ್ಲ ಅಸಹ್ಯ ನಡೆದಿದೆ. ನಿಮ್ಮ ತಂದೆಯವರಿಂದ ನೀವು ಕಲಿತದ್ದು ಇದೇನಾ ಬೊಮ್ಮಾಯಿಯ ವರೇ ಎಂದು ಎಚ್‌ಡಿಕೆ ಪ್ರಶ್ನಿಸಿದರು.
ನನ್ನ ಮೇಲೆ ಮಾಡಿದ ಆರೋಪವನ್ನು ಎಚ್.ಡಿ. ಕುಮಾರಸ್ವಾಮಿ ಸಾಬೀತು ಮಾಡಬೇಕು. ನನ್ನ ಮನೆಯಲ್ಲಿ ಆತ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು ಸತ್ಯಕ್ಕೆ ಅಪಚಾರವಾಗುವಂಥ ಆಪಾದನೆ ಮಾಡಿದ್ದಾರೆ. ಯಾವ ಕಾರಣದಿಂದ ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದು
ತಿಳಿಯುತ್ತಿಲ್ಲ.
– ಆರಗ ಜ್ಞಾನೇಂದ್ರ, ಗೃಹ ಸಚಿವ
ಇನ್ನು ಮೂರು ತಿಂಗಳಲ್ಲಿ ನಾನೇ ಸಿಎಂ
ಮುಂದಿನ ಮೂರು ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿಯಾಗಲಿದ್ದು, ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಖಜೂರಿ ಗ್ರಾಮದಲ್ಲಿ ಸೋಮವಾರ ನಡೆದ ಜೆಡಿಎಸ್ ಪಂಚರತ್ನ ರಥಯಾತ್ರೆಯ ರೋಡ್ ಶೋ ಕಾರ್ಯಕ್ರಮದಲ್ಲಿ ಅನೇಕ ರೈತರು ಸಾಲ ಮನ್ನಾ ಬಗ್ಗೆ ಅಳಲು ತೋಡಿಕೊಂಡರು. ಅದಕ್ಕೆ ಸ್ಪಂದಿಸಿ ಮಾತನಾಡಿದ ಅವರು, ನಾನು ಅಧಿಕಾರದಲ್ಲಿದ್ದಾಗ ಮನ್ನಾ ಮಾಡಿದ ರೈತರ ಸಾಲವನ್ನು ಈ ಸರಕಾರ ಪೂರ್ಣವಾಗಿ ಜಾರಿಗೆ ತರದೆ ಸಾಕಷ್ಟು ಸಮಸ್ಯೆಯಾಗಿದೆ. ಸಾಲದ 95ರ ಫಾರಂ ತಿರಸ್ಕೃತವಾದರೆ ಸಂಬಂ ಧಿತ ಅ ಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಕ್ರಮ ಕೈಗೊಳ್ಳಬೇಕಿತ್ತು. ಅಧಿ ಕಾರದಲ್ಲಿ 500 ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದೇನೆ. ಅದನ್ನು ರಾಜ್ಯ ಸರಕಾರ ಸಾಲ ಮನ್ನಾಕ್ಕೆ ಬಳಸದೆ ಬೇರೆ ಕಡೆ ವರ್ಗಾಯಿಸಿದೆ ಎಂದು ಆರೋಪಿಸಿದರು.
ಇನ್ನು ಮೂರು ತಿಂಗಳಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಸಾಲ ಮನ್ನಾ ಸಹಿತ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಪ್ರಧಾನಮಂತ್ರಿ ಬೆಳೆವಿಮೆ ಯೋಜನೆ ಮೋಸದ ಕಂಪೆನಿಯಾಗಿದೆ. ಸರಕಾರ ಅ ಧಿಕಾರಕ್ಕೆ ಬಂದರೆ ಮುಂದೆ ರೈತರಿಗೆ ಸರಕಾರದಿಂದಲೇ ಬೆಳೆ ವಿಮೆ ಜಾರಿಗೆ ತರುತ್ತೇನೆ ಎಂದು ಅವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.