ಶಾಲೆ ಕೋಣೆ ಮೇಲ್ಛಾವಣಿ ಕುಸಿತ
Team Udayavani, Jul 14, 2022, 3:22 PM IST
ಜೇವರ್ಗಿ: ಕಳೆದ ಎಂಟಂತ್ತು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲೂಕಿನ ಹರನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಣೆಯೊಂದರ ಮೇಲ್ಛಾವಣಿ (ಚತ್) ಕುಸಿದಿದ್ದು, ಬಾರೀ ಅನಾಹುತವೊಂದು ತಪ್ಪಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ಮಂಗಳವಾರ ನಸುಕಿನ ಜಾವ ಶಾಲೆ ಮುಖ್ಯ ಶಿಕ್ಷಕರ ಕೋಣೆಯ ಮೇಲ್ಛಾವಣಿ ಕುಸಿದು ಬಿದ್ದು, ಶಾಲೆಯ ಮುಖ್ಯವಾದ ಪೀಠೊಪಕರಣ ಧ್ವಂಸಗೊಂಡಿವೆ. ಈ ಘಟನೆ ಶಾಲೆ ಪ್ರಾರಂಭಕ್ಕೂ ಮುನ್ನ ನಡೆದ ಪರಿಣಾಮ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಶಾಲೆ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದೇ ಆದರೆ ಸಾಕಷ್ಟು ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಹರನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದಾರು ಕೋಣೆಗಳು ಶಿಥಿಲಗೊಂಡು ಮಳೆಯಿಂದ ಸೋರುತ್ತಿವೆ. ಈ ಬಗ್ಗೆ ಶಾಲಾ ಸಿಬ್ಬಂದಿ, ಎಸ್ಡಿಎಂಸಿ ಸದಸ್ಯರು ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
1ರಿಂದ 7ನೇ ತರಗತಿ ಇದ್ದರೂ, ಮೂರು ಕೋಣೆಗಳಲ್ಲಿ ಮಾತ್ರ ಪಾಠ ಪ್ರವಚನ ಮಾಡಲಾಗುತ್ತಿದೆ. ಇದರಿಂದ ಮಕ್ಕಳ ಕಲಿಕೆಗೆ ಸಾಕಷ್ಟು ತೊಂದರೆಯಾಗುತ್ತಿದೆ. ಕೂಡಲೇ ಶಾಲೆಯ ದುರಸ್ಥಿಗೆ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದರೇ ಮುಂದಾಗುವ ಅನಾಹುತಕ್ಕೆ ತಾಲೂಕಾಡಳಿತ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹರನೂರ ಶಾಲೆ ಕೋಣೆಯ ಮೇಲ್ಛಾವಣಿ ಕುಸಿದ ನಂತರ ಬಿಆರ್‌ಸಿ ಮತ್ತು ಸಿಆರ್‌ಸಿ ಅವರನ್ನು ಕಳುಹಿಸಿ ಹಾನಿಗೀಡಾದ ಕುರಿತು ವರದಿ ಸಲ್ಲಿಸಿದ್ದಾರೆ. ವರದಿ ಮೇಲಧಿ ಕಾರಿಗಳಿಗೆ ಕಳುಹಿಸಲಾಗಿದೆ. ಶಾಲೆ ಕೋಣೆಗಳ ದುರಸ್ಥಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. -ಶೋಭಾ ತಾಳಿಕೋಟಿ, ಬಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.