ಚುನಾವಣೆವರೆಗೆ ಮಾತ್ರ ಪ್ರತ್ಯೇಕ ಧರ್ಮ ಹೋರಾಟ
Team Udayavani, Jan 28, 2018, 11:05 AM IST
ಕಲಬುರಗಿ: “ವೀರಶೈವ ಲಿಂಗಾಯತ ಎರಡೂ ಒಂದೇ. ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟ ಚುನಾವಣೆವರೆಗೂ ಮಾತ್ರವಿರುತ್ತದೆ’ ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದರು.
ಆಳಂದ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಚಿವರು, ಶಾಸಕರು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಮಂತ್ರಿ ಸ್ಥಾನ ಹೋದ ಮೇಲೆ ಇವರನ್ನು ಯಾರೂ ಕೇಳುವುದಿಲ್ಲ. ಏನಿದ್ದರೂ ಚುನಾವಣೆವರೆಗೂ ಅವರ ಹೋರಾಟ. ನಂತರ ಅವರೆಲ್ಲರೂ ತಮ್ಮ ಬಳಿಯೇ ಬರ್ತಾರೆ. ಯಾರು ಪ್ರತ್ಯೇಕತೆ ಬಯಸುತ್ತಾರೆಯೋ ಅವರು ಹೋಗಲಿ. ಕುಳಿತು ಚರ್ಚಿಸಲು ಸಭೆ ಕರೆದರೂ ಬಾರದೇ ಹೊರಗಡೆ ಬಾಯಿಗೆ ಬಂದಂತೆ ಮಾತಾಡುತ್ತಾರೆ.
ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಸಲುವಾಗಿ ರಚಿಸಲಾಗಿರುವ ತಜ್ಞರ ಸಮಿತಿಗೆ ಮಹತ್ವ ಹಾಗೂ ಮಾನ್ಯತೆಯನ್ನು ಮಹಾಸಭಾ ನೀಡುವುದಿಲ್ಲ. ಸಮಿತಿ ಕೆಲಸಕ್ಕೆ ಬಾರದ್ದು ಎಂದು ಈಗಾಗಲೇ ಹೇಳಲಾಗಿದೆ.ಬರುವ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸುತ್ತೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸ್ಪರ್ಧೆಯೂ ನಿಶ್ಚಿತ-ಗೆಲವೂ ಅಷ್ಟೇ ನಿಶ್ಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.