ಮತದಾರರ ಪಟ್ಟಿ ಸಿದ್ಧತೆಗೆ ಆದೇಶ


Team Udayavani, Mar 17, 2017, 3:25 PM IST

gul4.jpg

ವಾಡಿ: ಪಟ್ಟಣದ ಪುರಸಭೆ ಮೂರನೇ ಅವಧಿ ಚುನಾವಣೆಗೆ ಸರಕಾರ ಪ್ರಕಟಿಸಿದ್ದ ವಾರ್ಡ್‌ವಾರು ಮೀಸಲಾತಿ ಅಧಿಧಿಸೂಚನೆ ಪಟ್ಟಿಗೆ ಸಂಬಂಧಿಸಿದಂತೆ ಸ್ಥಳೀಯರು ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಗಳು ಅನರ್ಹಗೊಂಡಿದ್ದು, ಪ್ರಕಟಿಸಲಾಗಿರುವ ಮೀಸಲಾತಿ ಪಟ್ಟಿಯನ್ನೆ ಅಂತಿಮಗೊಳಿಸಿ ಸರಕಾರ ಆದೇಶ ಹೊರಡಿಸಿದೆ. 

ಪಟ್ಟಣದ ಪುರಸಭೆ ಆಡಳಿತದ ಐದು ವರ್ಷದ ಅಧಿಕಾರವಧಿ ಪೂರ್ಣಗೊಂಡಿದ್ದು, ಸರಕಾರ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿದೆ. ಒಟ್ಟು 23 ವಾರ್ಡ್‌ಗಳನ್ನು ಜನಸಂಖ್ಯಾಧಾರಿತವಾಗಿ ಮರುವಿಂಗಡಣೆ ಮಾಡಲಾಗಿದ್ದು, ವಾರದ ಹಿಂದೆಯಷ್ಟೇ ವಾರ್ಡ್‌ವಾರು ಮೀಸಲಾತಿ ಕರಡು ಪ್ರಕಟಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ ಬಲವಾದ ಕಾರಣಗಳು ಮತ್ತು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಏಳು ದಿನಗಳ ಕಾಲಾವಕಾಶ ನೀಡಲಾಗಿತ್ತು. ಮೀಸಲಾತಿ ಹಂಚಿಕೆ ನಿಯಮ ಪ್ರಶ್ನಿಸಿ ವಾಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೆಮೂದ್‌ ಸಾಹೇಬ, ಕಾಂಗ್ರೆಸ್‌ ಮೈನಾರಿಟಿ ಘಟಕದ ಕಾರ್ಯದರ್ಶಿ ನಾಸೀರ್‌ ಹುಸೇನ್‌ ಹಾಗೂ ಪುರಸಭೆ ಅಧ್ಯಕ್ಷ, ಬಿಜೆಪಿಯ ಭಾಗವತ ಸುಳೆ ಸೇರಿದಂತೆ ಒಟ್ಟು ಮೂರು ಆಕ್ಷೇಪಣಾ ಅರ್ಜಿಗಳು ಜಿಲ್ಲಾಧಿ ಧಿಕಾರಿಗಳಿಗೆ ಸಲ್ಲಿಕೆಯಾಗಿದ್ದವು.

ಅರ್ಜಿ ಪರಿಶೀಲಿಸಿರುವ ನಗರಾಭಿವೃದ್ಧಿ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಕೆ.ಎಲ್‌. ಬಾಗಲವಾಡೆ, ಮೀಸಲಾತಿಯಲ್ಲಿ ಕಿಂಚಿತ್ತೂ ಬದಲಾವಣೆ ಮಾಡದೆ ಕರಡು ಮೀಸಲಾತಿ ಪಟ್ಟಿಯನ್ನೆ ಅಂತಿಮಗೊಳಿಸಿ ಆದೇಶ ಹೊರಡಿಸಿದ್ದಾರೆ. ಮೀಸಲಾತಿ ಪಟ್ಟಿಯಲ್ಲಿ ಬಿಸಿ(ಎ) ಮತ್ತು ಬಿಸಿ(ಬಿ) ವರ್ಗಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ಷೇಪಣೆ ಸಲ್ಲಿಸಿದ್ದವರಿಗೆ ಇದರಿಂದ ಹಿನ್ನಡೆಯಾದಂತಾಗಿದೆ. 

ಮತದಾರರ ಪಟ್ಟಿ ಸಿದ್ಧತೆಗೆ ಆದೇಶ: ಪುರಸಭೆ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಸಿದ್ಧತೆಗಳು ಆರಂಭವಾಗಿದ್ದು, ಅಧಿಧಿಕಾರಿಗಳು ಚುರುಕಿನಿಂದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಈ ಕುರಿತು ಬುಧವಾರ ಪಟ್ಟಣದ ಪುರಸಭೆಗೆ ಭೇಟಿ ನೀಡಿದ ಶಿರಸ್ತೇದಾರ ಶ್ರೀನಿವಾಸ ಚಾಪೆಲ್‌, ಗ್ರಾಮ ಲೆಕ್ಕಿಗರು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಬಿಎಲ್‌ಒಗಳನ್ನಾಗಿ ನೇಮಿಸಿ ಸಭೆ ನಡೆಸಿದರು.

ವಾರ್ಡ್‌ವಾರು ಮತದಾರರ ಪಟ್ಟಿಯನ್ನು ತಕ್ಷಣ ಸಿದ್ಧಪಡಿಸಿ ಸಲ್ಲಿಸುವಂತೆ ಆದೇಶ ನೀಡಿದರು. ತಲಾಟಿ ವೀರಭದ್ರಪ್ಪ ಗೋಡಿಯಾಳ, ಪುರಸಭೆ ನೋಡಲ್‌ ಅಭಿಯಂತರ ಮನೋಜಕುಮಾರ ಹಿರೋಳಿ, ಈಶ್ವರ ಅಂಬೇಕರ, ರಾಹುಲ ಹುಗ್ಗಿ, ನಾಗು ವಾಲೀಕಾರ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.