ಸೇವಾ ಸಿಂಧು: 47 ಇಲಾಖೆ ಸೇವೆ ಲಭ್ಯ
Team Udayavani, Jul 5, 2020, 8:49 AM IST
ಕಲಬುರಗಿ: ಸೇವಾ ಸಿಂಧು ಯೋಜನೆಯಡಿ ರಾಜ್ಯದ ವಿವಿಧ 47 ಇಲಾಖೆಗಳ 451 ಸೇವೆಗಳನ್ನು ಆನ್ ಲೈನ್ ಮೂಲಕ ಪಡೆಯಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಶಂಕರ್ ವಣಿಕ್ಯಾಳ್ ತಿಳಿಸಿದ್ದಾರೆ.
ಸೇವಾ ಸಿಂಧು 31ನೇ ಮಿಷನ್ ಮೋಡ್ ಯೋಜನೆಯಾಗಿದೆ. ಎಲ್ಲ ಸರ್ಕಾರಿ ಇಲಾಖೆಯಲ್ಲಿನ ಸೇವೆಯನ್ನು ಗ್ರಾಹಕರ ಮನೆ ಬಾಗಿಲಿಗೆ ಆನ್ ಲೈನ್ ಮೂಲಕ ತಲುಪಿಸುವ ಸೇವೆ ಇದಾಗಿದೆ. ಪ್ರಸ್ತುತ ಸೇವಾ ಸಿಂಧು ಯೋಜನೆಯಡಿ ಕಂದಾಯ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಔಷಧಗಳ ನಿಯಂತ್ರಣ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಾರಿಗೆ ಇಲಾಖೆ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ, ಕೃಷಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಿದ್ಯುತ್ ಪರಿವೀಕ್ಷಣಾಲಯ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಲಭ್ಯ ಇವೆ. ಎಲ್ಲ ಸೇವೆಗಳು ಸೇವಾ ಸಿಂಧು www.sevasindhu.karnataka.gov.in ವೆಬ್‌ಸೈಟ್ ಮೂಲಕ ಸಾಮಾನ್ಯ ಸೇವಾ ಕೇಂದ್ರ ಹಾಗೂ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಜಿಲ್ಲೆಯಲ್ಲಿ ಒಟ್ಟು 289 ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧುಗೆ ನೋಂದಾಯಿಸಿಕೊಂಡು ಸೇವೆ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.