ಶಹಾಬಾದ ನಗರಸಭೆ : ಶೇ. 66.6 ಮತದಾನ
Team Udayavani, Mar 30, 2021, 7:12 PM IST
ಶಹಾಬಾದ: ನಗರಸಭೆ ವಾರ್ಡ್ ನಂ.18ರ ಉಪ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಶೇ 66.6 ಮತದಾನವಾಗಿದೆ. ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆ ಕೇಂದ್ರದಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿತ್ತು. ಬೆಳಗಿನ ಜಾವದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸಿದ್ದರು.
ಮಧ್ಯಾಹ್ನ ಹೊತ್ತಿಗೆ ನೀರಸ ಪ್ರಕ್ರಿಯೆ ಕಂಡು ಬಂದರೂ, ಮತ್ತೆ ನಾಲ್ಕು ಗಂಟೆಯಿಂದ ಬಿರುಸಿನ ಮತದಾನ ಕಂಡುಬಂದಿತು. ಹೊಟ್ಟೆ ಪಾಡಿಗಾಗಿ ಪಟ್ಟಣಕ್ಕೆ ಗುಳೆ ಹೋಗಿದ್ದ ಜನರನ್ನು ಅಭ್ಯರ್ಥಿಗಳು ಕರೆಯಿಸಿ, ತಮ್ಮ ಪರವಾಗಿ ಮತದಾನ ಮಾಡಿಸಲು ಹರಸಾಹಸ ಪಡುತ್ತಿದ್ದರು. ಕೂಲಿಕಾರರು, ರೈತರು ಬೆಳಗ್ಗೆ ಬೇಗನೆ ಬಂದು ಮತ ಚಲಾಯಿಸಿ ತಮ್ಮ ಕೆಲಸಕ್ಕೆ ಹೋಗುತ್ತಿದ್ದರು. ಮತಗಟ್ಟೆಯ ಸಮೀಪದಲ್ಲಿ ಅಭ್ಯರ್ಥಿಗಳು ನಿಂತು ಮತದಾರರನ್ನು ಓಲೈಸಲು ಮುಂದಾಗುತ್ತಿದ್ದರು. ಗದಗ, ರಾಯಚೂರು, ಕಲಬುರಗಿ, ಯಾದಗಿರಿ, ದಾವಣೆಗೆರೆಯಲ್ಲಿ ಕೆಲಸಕ್ಕೆ ಹೋದ ಮತದಾರರನ್ನು ನಗರಕ್ಕೆ ಕರೆತರಲು ಅಭ್ಯರ್ಥಿಗಳು ವಾಹನಗಳ ವ್ಯವಸ್ಥೆ ಮಾಡಿದ್ದರು. ಅಲ್ಲದೇ ಅಭ್ಯರ್ಥಿಗಳು ಮತದಾರರಿಗೆ ಕರೆ ಮಾಡಿ ಮತ ಚಲಾಯಿಸಲು ಹೇಳುತ್ತಿರುವುದು ಕಂಡು ಬಂದಿತು.
ಮತದಾನದ ವೇಳೆ ಸ್ಯಾನಿಟೈಸರ್, ಸ್ಕ್ರೀನಿಂಗ್ ಮೂಲಕ ಪರೀಕ್ಷೆ ನಡೆಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಮತ ಚಲಾಯಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಡಿವೈಎಸ್‌ಪಿ ಉಮೇಶ ಚಿಕ್ಕಮಠ ನೇತೃತ್ವದಲ್ಲಿ ಪಿಎಸ್‌ಐಗಳಾದ ತಿರುಮಲೇಶ, ಯಲ್ಲಮ್ಮ ಹಾಗೂ ಪೊಲೀಸ್ ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.
ನಗರಸಭೆಯ ವಾರ್ಡ್ ನಂ.18ರಲ್ಲಿ 998 ಮತದಾರರಿದ್ದು, ಅದರಲ್ಲಿ 490 ಪುರುಷ ಹಾಗೂ 508 ಮಹಿಳಾ ಮತದಾರರಿದ್ದಾರೆ. ಅದರಲ್ಲಿ 615 ಮತದಾರರು (314 ಪುರುಷ, 301 ಮಹಿಳೆ) ಮತ ಚಲಾಯಿಸಿದರು. ತಾಲೂಕಿನಲ್ಲಿ ಒಟ್ಟು ಶೇ 66.6 ಮತದಾನದಲ್ಲಿ ಶೇ. 64 ಪುರುಷ ಮತದಾರು ಹಾಗೂ ಶೇ. 59.25 ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆಂದು ತಹಶೀಲ್ದಾರ್ ಸುರೇಶ ವರ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.