ದೇಶದ ಹಿತದೃಷ್ಟಿಯಿಂದ ಪೌರತ್ವ ಕಾಯ್ದೆ ಜಾರಿ
ಕಾಂಗ್ರೆಸ್‌ನಿಂದ ಕೀಳು ಮಟ್ಟದ ರಾಜಕೀಯ ಅಧಿಕಾರ ಕಳೆದುಕೊಂಡು ಹತಾಶರಾಗಿದ್ದಾರೆ ಕೈ ಮುಖಂಡರು
Team Udayavani, Jan 25, 2020, 10:41 AM IST
ಶಹಾಬಾದ: ಪೌರತ್ವ ಕಾಯ್ದೆ ಮೂಲಕ ದೇಶದ ಅಲ್ಪಸಂಖ್ಯಾತ ಸಮುದಾಯದವರನ್ನು ದೇಶದಿಂದ ಹೊರಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.
ಶುಕ್ರವಾರ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಕಲಬುರಗಿ ಗ್ರಾಮೀಣ ಬಿಜೆಪಿ ಮಂಡಲ, ಶಹಾಬಾದ ಬಿಜೆಪಿ ಮಂಡಲದ ನೂತನ ಅಧ್ಯಕ್ಷರ ಪದಗ್ರಹಣ, ಸನ್ಮಾನ ಕಾರ್ಯಕ್ರಮ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಆಯೋಜಿಸಲಾಗಿದ್ದ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.
ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಪೌರತ್ವ ಕಾಯ್ದೆ ಜಾರಿಗೆ ತಂದಿದ್ದಾರೆ. ಆದರೆ ಕಾಂಗ್ರೆಸ್‌ನವರು ಮುಸ್ಲಿಂ ಸಮುದಾಯವನ್ನು ಎತ್ತಿ ಕಟ್ಟಿ, ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಪಾದಿಸಿದರು. ಕಲಬುರಗಿ ನಗರದಲ್ಲಿ ನಾಗರಿಕ ಹೋರಾಟ ಸಮಿತಿ
ವತಿಯಿಂದ ಕಾಯ್ದೆ ಬೆಂಬಲಿಸಿ ಲಕ್ಷಾಂತರ ಜನರು ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡು ಹತಾಶವಾಗಿ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಮುಖಂಡ ಸುಭಾಷ ಬಿರಾದಾರ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಶಶಿಕಲಾ ಟೆಂಗಳಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಕಲಬುರಗಿ ಗ್ರಾಮೀಣ ನೂತನ ಅಧ್ಯಕ್ಷ ಸಂಗಮೇಶ ವಾಲಿ, ಶಹಾಬಾದ ಮಂಡಲದ ನೂತನ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಅವರನ್ನು ಸನ್ಮಾನಿಸಲಾಯಿತು.
ಆಳಂದ ಶಾಸಕ ಸುಭಾಷ ಗುತ್ತೇದಾರ, ಮುಖಂಡರಾದ ರವಿ ಬಿರಾದಾರ, ದಿವ್ಯ ಹಾಗರಗಿ, ರೇವಣಸಿದ್ದಪ್ಪ ಮೂಲಗೆ, ರಾಜಕುಮಾರ ಕೋಟೆ, ಲಿಂಗರಾಜ ಬಿರಾದಾರ, ಶಶಿಕಲಾ ಟೆಂಗಳಿ, ವಿಜಯಲಕ್ಷ್ಮೀ ರಾಗಿ, ನರೇಂದ್ರ ವರ್ಮಾ, ಸುಭಾಷ ಜಾಪುರ, ಅನೀಲ ಬೋರಗಾಂವಕರ್, ಅರುಣ ಪಟ್ಟಣಕರ್, ಅಶೋಕ ಜಿಂಗಾಡೆ, ನಿಂಗಣ್ಣ ಹುಳಗೋಳಕರ್, ಹರ್ಷವರ್ಧನ ಕೋಗಲೆ, ಅಣೆಪ್ಪ ಇಂಗಿನಶೆಟ್ಟಿ, ಭಾಗಿರಥಿ ಗುನ್ನಾಪುರ, ಸಿದ್ದಣ್ಣಗೌಡ ಮಾಲಿ ಪಾಟೀಲ, ಅರವಿಂದ ಚವ್ಹಾಣ, ರವಿ ರಾಠೊಡ, ಬಸವರಾಜ ಬಿರಾದಾರ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.